ಭ್ರಷ್ಟಾಚಾರವನ್ನು ಸಹಿಸಲಾಸದ್ಯ : ಅರವಿಂದ್ ಕೇಜ್ರಿವಾಲ್
ಯಾವುದೇ ಇಲಾಖೆಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕ್ಷಮೆ ಇಲ್ಲ ಹಾಗೂ ಭ್ರಷ್ಟಾಚಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ...
ನವದೆಹಲಿ: ಯಾವುದೇ ಇಲಾಖೆಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕ್ಷಮೆ ಇಲ್ಲ ಹಾಗೂ ಭ್ರಷ್ಟಾಚಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುಡುಗಿದ್ದಾರೆ.
ಈ ಸಂಬಂಧ ತಮ್ಮ ಟ್ವೀಟ್ ನಲ್ಲಿ ಟ್ವಿಟ್ಟರ್ ಮಾಡಿಕೊಂಡಿರುವ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿಯ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆ ನಡೆಸಿದ ಕೇಜ್ರಿವಾಲ್, ತಮ್ಮ ಇಲಾಖೆಗಳಲ್ಲಿ ಭ್ರಷ್ಟಾಚಾರದ ಪ್ರಮಾಣ ಶೂನ್ಯವಾಗಿರಬೇಕು ಎಂದು ಕರೆ ನೀಡಿದ್ದಾರೆ.
ಇನ್ನು ಶನಿವಾರವಷ್ಚೇ ಆಮ್ ಆದ್ಮಿ ಪಕ್ಷದ ಶಾಸಕರು ಹಾಗೂ ಅವರ ಕುಟುಂಬಸ್ಥರನ್ನು ಕರೆದು, ಆಹಾರ ಸಚಿವ ಆಸಿಂ ಅಹಮದ್ ಖಾನ್ ಅವರ ವಜಾಗೊಳಿಸಿದ್ದ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಭ್ರಷ್ಟಾಚಾರದ ವಿರುದ್ಧ ಹೋರಾಡುವುಂತೆ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.