ಪಣಜಿ: ರಾಷ್ಟ್ರ ರಾಜಧಾನಿ ದೆಹಲಿ ಸಮೀಪದಲ್ಲೇ ಇರುವ ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದ ಹತ್ಯೆ ಪ್ರಕರಣದಿಂದ ಎನ್ ಡಿ ಎ ಹಾಗೂ ಬಿಜೆಪಿಗೆ ಹಾನಿ ಉಂಟು ಮಾಡುತ್ತದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಪಣಜಿಯಲ್ಲಿ ನಡೆದ ಸಾರ್ವಜನಿಕರ ಜೊತೆಗಿನ ಸಮವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಂತಹ ಘಟನೆಗಳು ರಾಜಕೀಯ ಆಸಕ್ತಿಗಳ ಮೇಲೆ ಆಘಾತ ಉಂಟು ಮಾಡುತ್ತದೆ ಎಂದು ಹೇಳಿದರು.
ಇಂಥ ಪ್ರಕರಣಗಳು ಬಿಜೆಪಿ ಮತ್ತು ಎನ್ ಡಿಎ ಮೇಲೆ ಕೆಟ್ಟ ಪರಿಣಾಮ ಬೀರುವುದಲ್ಲದೇ ಪ್ರಧಾನಿ ನರೇಂದ್ರ ಮೋದಿ ದೂರ ದೃಷ್ಟಿ ಯೋಜನೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಇನ್ನು ದಾದ್ರಿ ಪ್ರಕರಣದ ಬಗ್ಗೆ ಮೋದಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಇಂಥ ಪ್ರಕರಣಗಳ ಬಗ್ಗೆ ಪ್ರಧಾನಿ ಸಾರ್ವಜನಿಕವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎನ್ನುವ ದೃಷ್ಟಿಯಿಂದ ಅವರು ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದ್ದಾರೆ.