ಅನುಪಮ್ ಖೇರ್ 
ದೇಶ

ಸಾಹಿತಿಗಳಿಂದ ಪ್ರಶಸ್ತಿ ವಾಪಸ್ ರಾಜಕೀಯ ಪ್ರೇರಿತ: ಅನುಪಮ್ ಖೇರ್

ಬರಹಗಾರರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಸಾಹಿತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ...

ಮುಂಬೈ: ಬರಹಗಾರರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಸಾಹಿತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರು, ಇದೊಂದು ರಾಜಕೀಯ ಪ್ರೇರಿತ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಕೆಟ್ಟ ಹೆಸರು ತರುವ ಉದ್ದೇಶ ಅಷ್ಟೇ ಎಂದಿದ್ದಾರೆ.

'ಇದೊಂದು ರಾಜಕೀಯ ಪ್ರೇರಿತ ಅನಿಸುತ್ತಿದೆ. ಭಾರತದಲ್ಲಿ ಹಿಂಸಾತ್ಮಕ ಘಟನೆಗಳು ನಡೆಯುತ್ತಿರುವುದು ಇದೇ ಮೊದಲೇನಲ್ಲ' ಎಂದು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

'ಪ್ರಧಾನಿ ಮೋದಿ ಅವರಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ಒಂದು ವೇಳೆ ಅವರಿಗೆ ಪ್ರಶಸ್ತಿ ಹಿಂದಿರುಗಿಸುವುದಾದರೆ, ಎಲ್ಲವನ್ನೂ ಏಕೆ ಹಿಂದಿರುಗಿಸಬಾರದು?' ಎಂದು ಪ್ರಶ್ನಿಸಿದ್ದಾರೆ.

ಸಾಹಿತಿಗಳ ಮೇಲಿನ ದಾಳಿಯನ್ನು ಖಂಡಿಸಿ ನಯಂತಾರ ಸೆಹಗಲ್, ಸಾರಾ ಜೋಸೆಫ್, ಉದಯ್ ಪ್ರಕಾಶ್, ಅಶೋಕ್ ವಾಜಪೇಯಿ ಹಾಗೂ ಅರವಿಂದ್ ಮಾಲಗತ್ತಿ ಸೇರಿದಂತೆ ಹಲವು ಲೇಖಕರು ತಮ್ಮ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT