ಬಗ್ ಪತ್ : ಉತ್ತರ ಪ್ರದೇಶದ ಬಗ್ ಪತ್ ಜಿಲ್ಲೆಯ ತತಾರಿ ಎಂಬಲ್ಲಿ ಶಾಲಾ ಬಸ್ಸು ಮಗುಚಿಬಿದ್ದು ನಾಲ್ಕನೇ ತರಗತಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟು, 12 ಮಂದಿ ಗಾಯಗೊಂಡಿದ್ದಾರೆ.
ಬಸ್ಸಿನ ಚಾಲಕ 30 ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಮಗುಚಿಬಿತ್ತು ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ವಿದ್ಯಾಸಾಗರ್ ಮಿಶ್ರಾ ತಿಳಿಸಿದ್ದಾರೆ.
ನಾಲ್ಕನೇ ತರಗತಿಯ ಆಯುಷ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದರೆ, 12 ಮಂದಿ ಗಾಯಗೊಂಡಿದ್ದಾರೆ. ಅವರನ್ನೆಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಒಬ್ಬ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ.
ಚಾಲಕನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ಆತ ತಪ್ಪಿಸಿಕೊಂಡಿದ್ದಾನೆ.ಘಟನೆಯಿಂದ ಆಘಾತಗೊಂಡಿರುವ ಮಕ್ಕಳ ಪೋಷಕರು ಮತ್ತು ಸ್ಥಳೀಯರು ಮೀರತ್-ಬಾಗ್ ಪತ್ ರಸ್ತೆಯನ್ನು ಬಂಧಿಸಿ ಚಾಲಕನನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.