ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ (ಸಂಗ್ರಹ ಚಿತ್ರ) 
ದೇಶ

ವೀರಭದ್ರ ಸಿಂಗ್ ಬಂಧನ ಕೋರಿ ಸುಪ್ರೀಂ ಮೊರೆ ಹೋದ ಸಿಬಿಐ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡಿರುವ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರನ್ನು ಬಂಧನಕ್ಕೊಳಪಡಿಸಲು ಅನುಮತಿ ನೀಡಬೇಕೆಂದು ಕೋರಿ ಸಿಬಿಐ ಅಧಿಕಾರಿಗಳು ಗುರುವಾ ಸುಪ್ರೀಂಕೋರ್ಟ್...

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡಿರುವ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರನ್ನು ಬಂಧನಕ್ಕೊಳಪಡಿಸಲು ಅನುಮತಿ ನೀಡಬೇಕೆಂದು ಕೋರಿ ಸಿಬಿಐ ಅಧಿಕಾರಿಗಳು ಗುರುವಾ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಸಿಬಿಐ ಸಲ್ಲಿಸಿರುವ ಅರ್ಜಿಯಲ್ಲಿ ಅಕ್ರಮ ಆಸ್ತಿ ಪ್ರಕರಣದಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರು ಸಿಲುಕಿದ್ದರೂ ಸಹ ಪ್ರಕರಣ ಸಂಬಂಧ ಅವರನ್ನು ಬಂಧನಕ್ಕೊಳಪಡಿಸಲು ನ್ಯಾಯಾಲಯ ಅನುಮತಿ ನೀಡುತ್ತಿಲ್ಲ. ಹೀಗಾಗಿ ವೀರಭದ್ರ ಸಿಂಗ್ ಅವರನ್ನು ಬಂಧನಕ್ಕೊಳಪಡಿಸಲು ಅನುಮತಿ ನೀಡಬೇಕು. ಅಲ್ಲದೆ, ಪ್ರಕರಣವನ್ನು ಹಿಮಾಚಲ ಪ್ರದೇಶ ಹೈ ಕೋರ್ಟ್ ನಿಂದ ದೆಹಲಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕೆಂದು ಕೋರಿದೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಹೆಚ್.ಎಲ್ ದತ್ತು ಅವರಿದ್ದ ಪೀಠ ಸ್ವೀಕರಿಸಿದ್ದು, ಪ್ರಕರಣ ಸಂಬಂಧದ ಮಾಹಿತಿಯನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್.ಪಟ್ವಾಲಿಯಾ ಅವರು ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.

ವೀರಭದ್ರ ಸಿಂಗ್‌ ಅವರು 2009-11ರ ಅವಧಿಯಲ್ಲಿ ಯುಪಿಎ ಸರಕಾರದಲ್ಲಿ ಕೇಂದ್ರ ಉಕ್ಕು ಸಚಿವರಾಗಿದ್ದಾಗ ತಮ್ಮ ಘೋಷಿತ ಆಸ್ತಿಗಿಂತ ಹೆಚ್ಚುವರಿಯಾಗಿ 6.1 ಕೋಟಿ ರೂ.ಗಳ ಆಸ್ತಿ ಪಾಸ್ತಿಯನ್ನು ಅವರು ಮತ್ತು ಅವರ ಕುಟುಂಬದವರು ಕೂಡಿಹಾಕಿದ್ದರು ಎಂಬ ಕೇಸನ್ನು ಸಿಬಿಐ ಈಚೆಗೆ ಖಾಯಂ ಕೇಸಾಗಿ ಪರಿವರ್ತಿಸಿ ತನಿಖೆಗೆ ಮುಂದಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!