ಕೇಂದ್ರ ಮಾಜಿ ಸಚಿವ ಶಶಿ ತರೂರ್ 
ದೇಶ

ಸಾಹಿತ್ಯ ಪ್ರಶಸ್ತಿ ಮರಳಿಸುವುದು ಅಗೌರವ ತೋರಿದಂತೆ: ಶಶಿ ತರೂರ್‌

ಪ್ರಮುಖ ಬರಹಗಾರರು ಒಬ್ಬರ ನಂತರ ಒಬ್ಬರಂತೆ ಸಾಹಿತ್ಯ ಪ್ರಶಸ್ತಿಗಳನ್ನು ಮರಳಿಸುವ ಕ್ರಮವನ್ನು ವಿರೋಧಿಸಿರುವ...

ತಿರುವನಂತಪುರ: ಪ್ರಮುಖ ಬರಹಗಾರರು ಒಬ್ಬರ ನಂತರ ಒಬ್ಬರಂತೆ ಸಾಹಿತ್ಯ ಪ್ರಶಸ್ತಿಗಳನ್ನು ಮರಳಿಸುವ ಕ್ರಮವನ್ನು ವಿರೋಧಿಸಿರುವ ಮಾಜಿ ಕೇಂದ್ರ ಸಚಿವ ಶಶಿ ತರೂರ್, ಸಾಹಿತಿಗಳಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇದ್ದರೂ ಕೂಡ ಅವರು ಪ್ರಶಸ್ತಿಯನ್ನು ಮರಳಿಸುವುದು ಆ ಪ್ರಶಸ್ತಿಗೆ ತೋರಿಸುವ ಅಗೌರವ ಎಂದು ಹೇಳಿದ್ದಾರೆ.

" ಕೆಲವು ಸಾಹಿತಿಗಳು ಪ್ರಶಸ್ತಿಗಳನ್ನು ಹಿಂತಿರುಗಿಸುವುದಕ್ಕೆ ವೈಯಕ್ತಿಕವಾಗಿ ನನಗೆ ವಿಷಾದವಿದೆ. ಬರಹಗಾರರ ಬುದ್ದಿವಂತಿಕೆ, ಸಾಹಿತ್ಯ ಜ್ಞಾನ, ಸೃಜನಶೀಲತೆ ಮತ್ತು ಶೈಕ್ಷಣಿಕ ಸಾಧನೆ ನೋಡಿ ಸಾಹಿತ್ಯ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಸಾಹಿತ್ಯ ಪ್ರಶಸ್ತಿ ನೀಡುವ ಅಕಾಡೆಮಿಯು ಸ್ವಾಯತ್ತ ಸಂಸ್ಥೆಯಾಗಿದೆ. ಪ್ರಶಸ್ತಿ ನೀಡುವ ಅದರ ಕೆಲಸವು ರಾಜಕಾರಣದ್ದಲ್ಲ. ನಮ್ಮ ಕಳವಳ, ಅತೃಪ್ತಿಗೆ ಕಾರಣವಾಗಿರುವ ಸಂಗತಿಗಳು ರಾಜಕೀಯವಾದವುಗಳೇ ಹೊರತು ಸಾಹಿತ್ಯಿಕವಾದವುಗಳಲ್ಲ ಎಂದು ಸಮಾರಂಭವೊಂದರ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಈಗಿನ ರಾಜಕೀಯ ಸ್ಥಿತಿಗತಿಗಳ ಬಗ್ಗೆ, ರಾಜಕೀಯ ವಾತಾವರಣದ ಬಗ್ಗೆ ಯಾರೇ ಆದರೂ ವಿರೋಧ ವ್ಯಕ್ತಪಡಿಸಬಹುದು. ವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ನಾವು ಸೆಟೆದು ನಿಲ್ಲಬಹುದು. ಆದರೆ ಸಾಹಿತ್ಯ ಪ್ರಶಸ್ತಿಗಳನ್ನು ಅಗೌರವಿಸುವುದು ಸರಿಯಲ್ಲ' ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಆದರೆ ಅನೇಕ ಬರಹಗಾರರು ಒಗ್ಗಟ್ಟಿನಿಂದ ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ