ಸಿಲಿಂಡರ್ ಸ್ಫೋಟಗೊಂಡ ಹೊಟೆಲ್ (ಚಿತ್ರಕೃಪೆ:ಝೊಮಾಟೊ) 
ದೇಶ

ಸಿಲಿಂಡರ್ ಸ್ಫೋಟ: 8 ಮಂದಿ ಧಾರುಣ ಸಾವು

ಮುಂಬೈನ ಹೊಟೆಲ್ ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, 8 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ...

ಮುಂಬೈ: ಮುಂಬೈನ ಹೊಟೆಲ್ ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, 8 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಪಶ್ಚಿಮ ಮುಂಬೈನ ಕುರ್ಲಾದಲ್ಲಿರುವ ಹೊಟೆಲ್ ಸಿಟಿ ಕಿನಾರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, 8 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮುಂಬೈ  ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸಾವಿಗೀಡಾದವರ ಕುರಿತು ಹೆಚ್ಚಿನ ಮಾಹಿತ ಲಭ್ಯವಾಗಿಲ್ಲವಾದರೂ, ಮೃತಪಟ್ಟವರಲ್ಲಿ  ಬಹುತೇಕರು ಹೊಟೆಲ್ ನಲ್ಲಿ ಕೆಲ ಮಾಡುತ್ತಿದ್ದ ಕೆಲಸದಾಳುಗಾಳಿಗಿರಬಹುದು ಎಂದು ಶಂಕಿಸಲಾಗುತ್ತಿದೆ.

ಸ್ಫೋಟದ ರಭಸಕ್ಕೆ ಹೊಟೆಲ್ ನಲ್ಲಿ ಬೆಂಕಿ ಜ್ವಾಲೆಗಳು ಎದ್ದಿದ್ದು, ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ದುರಂತದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಘಾಟ್ಕೊಪರ್ ನಲ್ಲಿರುವ ರಾಜವಾಡಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT