ಗೂಗಲ್ ಮ್ಯಾಪ್ 
ದೇಶ

ಕಾಶ್ಮೀರದ ಬಗ್ಗೆ ಕನಸು ಕಾಣುವುದನ್ನು ನಿಲ್ಲಿಸಿ,ಪಾಕಿಸ್ತಾನಕ್ಕೆ ಬಿಜೆಪಿ ಆಗ್ರಹ

ಕಣಿವೆ ರಾಜ್ಯ ಕಾಶ್ಮೀರದ ಬಗ್ಗೆ ಕನಸು ಕಾಣುವುದನ್ನು ಪಾಕಿಸ್ತಾನ ನಿಲ್ಲಿಸಲಿ ಎಂದು ಕಾಶ್ಮೀರ ಬಿಜೆಪಿ ಘಟಕ ಆಗ್ರಹಿಸಿದೆ.

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದ ಬಗ್ಗೆ ಕನಸು ಕಾಣುವುದನ್ನು ಪಾಕಿಸ್ತಾನ ನಿಲ್ಲಿಸಲಿ ಎಂದು ಕಾಶ್ಮೀರ ಬಿಜೆಪಿ ಘಟಕ ಆಗ್ರಹಿಸಿದೆ.

ಪಾಕಿಸ್ತಾನ ವಿಭಜನೆಗೊಂಡು ಒಂದು ರಾಷ್ಟ್ರವಾಗಿ ನಿಂತಿದೆ. ಆದರೆ ಪಾಕಿಸ್ತಾನದಿಂದ ಭಯಾತ್ಪಾದನೆ ಮಾತ್ರ ನಿಂತಿಲ್ಲ. ಪಾಕ್ ನ ನಿರಂತರ ಹಿಂಸಾಚಾರದಿಂದ ಸಾವಿರಾರು ಮುಗ್ಧರು ಸಾವನ್ನಪ್ಪಿದ್ದಾರೆ ಎಂದು ಕಾಶ್ಮೀರ ಬಿಜೆಪಿ ವಕ್ತಾರ ಖಾಲಿದ್ ಜೆಹಾಂಗೀರ್ ಹೇಳಿದ್ದಾರೆ.

ಕಾಶ್ಮೀರ ಜನ ರಾಜ್ಯ ಭಯೋತ್ಪಾದನೆ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ವಕ್ತಾರ ಖಾಜಿ ಖಲೀಲುಲ್ಲಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಹಾಂಗೀರ್, ಪಾಕಿಸ್ತಾನದಲ್ಲಿ ಭಯೋತ್ಪಾದಕರು ಸರ್ಕಾರಕ್ಕೆ ಸಮನಾಂತರವಾದ ಮತ್ತೊಂದು ಸರ್ಕಾರವನ್ನು ನಡೆಸುತ್ತಿದ್ದಾರೆ.

ರಾಜಕಾರಣಿಗಳು ಎಂದು ಕರೆಸಿಕೊಳ್ಳುವ ರಾಜಕೀಯ ನಾಯಕರು, ಅಲ್ಲಿನ ಸೇನಾ ಮುಖ್ಯಸ್ಥರ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ರಾಜ್ಯಗಳು ಭಾರತದ ಅವಿಭಾಜ್ಯ ಅಂಗಗಳು ಎಂದಿರುವ ಅವರು ಈ ಪ್ರಕರಣದ ಮೇಲಿನ ಚರ್ಚೆ ಅನಗತ್ಯ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!