ಬಿಹಾರ ಚುನಾವಣೆಯಲ್ಲಿ ಮೋದಿಗೆ ಹೀನಾಯ ಸೋಲು: ಕೇಜ್ರಿವಾಲ್ ಭವಿಷ್ಯ
ಬಿಹಾರ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸುತ್ತದೆ ಎಂದು ದೆಹಲಿ ಮುಖ್ಯಮಮಂತ್ರಿ ಹೇಳಿದ್ದಾರೆ.
ನವದೆಹಲಿ: ಬಿಹಾರದಲ್ಲಿ ಇಂದು ಎರಡನೇ ಹಂತದ ಚುನಾವಣೆಗೆ ಮತದಾನ ನಡೆಯಯುತ್ತಿದೆ. ಇದರ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿನೀಡಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಬಿಹಾರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಹೇಳುವ ಮೂಲಕ ನಿತೀಶ್ ಕುಮಾರ್ ಗೆ ಬಹಿರಂಗವಾಗಿ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ.
ನಿತೀಶ್ ಕುಮಾರ್ ಅಭೂತ ಪೂರ್ವ ಜಯ ಸಾಧಿಸಲಿದ್ದಾರೆ ಎಂದು ಹೇಳಿರುವ ಕೇಜ್ರಿವಾಲ್, ತಮಗೆ ಬಂದಿರುವ ಮಾಹಿತಿ ಪ್ರಕಾ ಬಿಹಾರದಲ್ಲಿ ಮೋದಿ ಸೋಲು ಅನುವುಭವಿಸುತ್ತಾರೆ ಎಂದು ಹೇಳಿದ್ದಾರೆ ಕೇಜ್ರಿವಾಲ್ ಬಿಹಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.