ಹಿಮಾಚಲ ಪ್ರದೇಶದಲ್ಲಿ ವ್ಯಕ್ತಿಯ ಕೊಲೆ (ಸಾಂದರ್ಭಿಕ ಚಿತ್ರ) 
ದೇಶ

ಹಿಮಾಚಲದಲ್ಲೂ ವ್ಯಕ್ತಿಯ ಹತ್ಯೆ

ಉತ್ತರಪ್ರದೇಶದ ದಾದ್ರಿಯಲ್ಲಿ ಬೀಫ್ ತಿಂದಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬರನ್ನು ಕೊಂದ ಘಟನೆ ಇನ್ನೂ ಜನಮಾನಸದಲ್ಲಿ ಹಸಿರಾಗಿರುವಾಗಲೇ ಹಿಮಾಚಲಪ್ರದೇಶದಲ್ಲೂ ಇದೇ ಮಾದರಿಯ ಘಟನೆ ನಡೆದಿದೆ...

ನವದೆಹಲಿ: ಉತ್ತರಪ್ರದೇಶದ ದಾದ್ರಿಯಲ್ಲಿ ಬೀಫ್ ತಿಂದಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬರನ್ನು ಕೊಂದ ಘಟನೆ ಇನ್ನೂ ಜನಮಾನಸದಲ್ಲಿ ಹಸಿರಾಗಿರುವಾಗಲೇ ಹಿಮಾಚಲಪ್ರದೇಶದಲ್ಲೂ  ಇದೇ ಮಾದರಿಯ ಘಟನೆ ನಡೆದಿದೆ.

ಹಸುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದಲ್ಲಿ ಸ್ಥಳೀಯರು ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿದ್ದಾರೆ. ಹಲ್ಲೆಗೊಳಗಾಗಿ ಮೃತಪಟ್ಟ ವ್ಯಕ್ತಿಯು ಉತ್ತರಪ್ರದೇಶದವನಾಗಿದ್ದು,  ಶಿಮ್ಲಾದಲ್ಲಿ ಈತನನ್ನು ಕೊಲೆ ಮಾಡಲಾಗಿದೆ. ಹತ್ಯೆಗೈದವರು ಭಜರಂಗ ದಳ ಕಾರ್ಯಕರ್ತರು ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ. ೫ ಹಸುಗಳು ಮತ್ತು ೧೦ ಎತ್ತುಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅನ್ನು ಸ್ಥಳೀಯರು ಅಟ್ಟಿಸಿಕೊಂಡು ಹೋಗಿದ್ದಾರೆ.

ಅಪಾಯ ಅರಿತ ಟ್ರಕ್ ಚಾಲಕ ಹಿಂಬದಿಯಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯಲು ಯತ್ನಿಸಿದ್ದಾನೆ. ನಂತರ ಟ್ರಕ್ ಅನ್ನು ಅಲ್ಲೇ ನಿಲ್ಲಿಸಿ, ಹಿಂದಿದ್ದ ಹಸುಗಳನ್ನು ಅಲ್ಲೇ ಬಿಟ್ಟು ಹೋಗಲು ಯತ್ನಿಸಿದ್ದು, ಆ ಸಮಯದಲ್ಲಿ ಒಂದು ಹಸು ಗಾಯಗೊಂಡಿದೆ. ಬಳಿಕ ಅಲ್ಲಿಂದ ಓಡಿಹೋಗಲು ಯತ್ನಿಸಿದರೂ ಸ್ಥಳೀಯರು ಹಿಡಿದು, ತೀವ್ರ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆತ ಕೊನೆಯುಸಿರೆಳೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್‌ನಲ್ಲಿದ್ದ ಇತರೆ ನಾಲ್ವರು ತಲೆಮರೆಸಿಕೊಂಡಿದ್ದರೂ, ಪೊಲೀಸರು ಹಾಗೂ ಸ್ಥಳೀಯರು ಸೇರಿ ಅವರನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಇದೇ ವೇಳೆ, ಮೃತ ನೂಮನ್‌ನ ಸಂಬಂಧಿ ಇಮ್ರಾನ್ ಅಸ್ಗರ್ ಎಂಬಾತ, ಭಜರಂಗದಳ ಕಾರ್ಯಕರ್ತರು ಟ್ರಕ್ ತಡೆದು ನಿಲ್ಲಿಸಿ, ಅತನನ್ನು ಹೊಡೆದು ಕೊಂದು ಹಾಕಿದ್ದಾರೆ.ಆಗ ತಾನೂ ಟ್ರಕ್‌ನಲ್ಲಿದ್ದೆ ಎಂದಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT