ದೇವೇಂದ್ರ ಫಡ್ನವೀಸ್ 
ದೇಶ

ಶಿವಸೇನೆ ಜೊತೆ ಐದು ವರ್ಷ ಸರ್ಕಾರ ಪೂರ್ಣ: ದೇವೇಂದ್ರ ಫ‌ಡ್ನವೀಸ್

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸರಕಾರವು ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ...

ನವದೆಹಲಿ: ಮಹಾರಾಷ್ಟ್ರದಲ್ಲಿ  ಬಿಜೆಪಿ-ಶಿವಸೇನೆ ಸರಕಾರವು ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ.

ಉದ್ಧವ್‌ ಠಾಕ್ರೆ ಅವರು  ಅ.22ರಂದು ಫ‌ಡ್ನವೀಸ್‌ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುತ್ತಾರೆ ಎಂಬ ವದಂತಿಯನ್ನು ತಳ್ಳಿಹಾಕಿದ ಫ‌ಡ್ನವೀಸ್‌, ತಮ್ಮ ಸರಕಾರ ಶಿವಸೇನೆಯಜೊತೆ 5 ವರ್ಷಗಳನ್ನು ಪೂರ್ಣಗೊಳಿಸುವುದು ಖಚಿತವೆಂದು ಹೇಳಿದರು.

"ಮಹಾರಾಷ್ಟ್ರ ಸರಕಾರದಲ್ಲಿ ಬಿಜೆಪಿ ಮತ್ತು ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆಯು ಬೇರ್ಪಡುವಂತಹ ಯಾವುದೇ ಪರಿಸ್ಥಿತಿ ಇಲ್ಲ. ಈ ಬಗ್ಗೆ ನನಗೆ ಶೇ.ನೂರು ವಿಶ್ವಾಸವಿದೆ. ನಮ್ಮ ಸರಕಾರವು ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವುದೆಂಬ ವಿಶ್ವಾಸವೂ ನನಗಿದೆ' ಎಂದು ಫ‌ಡ್ನವೀಸ್‌ ಭರವಸೆ ವ್ಯಕ್ತ ಪಡಿಸಿದರು.

ಪಾಕಿಸ್ತಾನ ಗಾಯಕ ಗುಲಾಂ ಅಲಿ ಅವರ ಮುಂಬಯಿಯಲ್ಲಿನ ಸಂಗೀತ ಕಾರ್ಯಕ್ರಮವನ್ನು ರದ್ದು ಪಡಿಸುವಲ್ಲಿ ಶಿವಸೇನೆ ಯಶಸ್ವಿಯಾಗಿತ್ತಲ್ಲದೇ ಆ ಬಳಿಕ ಪಾಕ್‌ ಮಾಜಿ ವಿದೇಶ ಸಚಿವ ಮಹಮೂದ್‌ ಕಸೂರಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಓಆರ್‌ಎಫ್ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿತ್ತು. ಈ ಎರಡು ಕಾರಣಗಳಿಂದಾಗಿ ತೀವ್ರ ಮುಜುಗರಕ್ಕೊಳಗಾಗಿದ್ದ ಮಹಾರಾಷ್ಟ್ರ ಸರಕಾರದಿಂದ ಶಿವಸೇನೆಯು ಹೊರ ನಡೆಯುವುದೆಂಬ ಊಹಾಪೋಹಗಳು ಗರಿಗೆದರಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ