ದೇಶ

ಎನ್‌ಜೆಎಸಿ ವಿಚಾರದಲ್ಲಿ ಬಿಜೆಪಿಯನ್ನು ಬೆಂಬಲಿಸುವುದಿಲ್ಲ: ಕಾಂಗ್ರೆಸ್

Shilpa D

ನವದೆಹಲಿ : ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ(ಎನ್‌ಜೆಎಸಿ) ಕಾಯ್ದೆಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳನ್ನು ಬೆಂಬಲಿಸುವುದಿಲ್ಲ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ನ್ಯಾಯಾಂಗ ಸೇರಿದಂತೆ ಎಲ್ಲ ಆಡಳಿತಾತ್ಮಕ ವ್ಯವಸ್ಥೆಗಳನ್ನು ಬುಡಮೇಲು ಮಾಡಲು ನರೇಂದ್ರ ಮೋದಿ ಸರ್ಕಾರ ಯತ್ನಿಸುತ್ತಿದೆ.  ದೇಶದಲ್ಲಿ ಸರ್ಕಾರದ ಬಗೆಗಿನ ವಿಶ್ವಾಸಾರ್ಹತೆ ನೆಲಕಚ್ಚಿದೆ ಎಂದು ಆರೋಪಿಸಿದ್ದಾರೆ.

‘ಎನ್‌ಜೆಎಸಿ ವಿಚಾರದಲ್ಲಿ ಬಿಜೆಪಿಯನ್ನು ಬೆಂಬಲಿಸುವುದಿಲ್ಲ. ಆದರೆ, ಕೊಲಿಜಿಯಂ ವ್ಯವಸ್ಥೆ ಸ್ವೀಕಾರಾರ್ಹವೇ ಅಥವಾ ಸ್ವೀಕಾರಾರ್ಹವಲ್ಲವೇ ಎಂಬುದರ ಬಗ್ಗೆ ಪಕ್ಷ ಸಧ್ಯ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದಿದ್ದಾರೆ. ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನು ನೇಮಕ ಮಾಡುವುದಕ್ಕೆ ಎನ್‌ಡಿಎ ಸರ್ಕಾರ ಜಾರಿಗೆ ತಂದಿದ್ದ  ಎನ್‌ಜೆಎಸಿ ಕಾಯ್ದೆಯನ್ನು ರದ್ದು ಮಾಡಿ ಸುಪ್ರೀಂಕೋರ್ಟ್‌ ಶುಕ್ರವಾರ ಮಹತ್ವದ ತೀರ್ಪು ನೀಡಿ  ಈ ಕಾಯ್ದೆ ‘ಅಸಾಂವಿಧಾನಿಕ’ ಎಂದು ಹೇಳಿದೆ

SCROLL FOR NEXT