ಬಿಸಿಸಿಐ ಕಚೇರಿಗೆ ಮುತ್ತಿಗೆ ಹಾಕಿದ ಶಿವಸೇನಾ ಕಾರ್ಯಕರ್ತರು 
ದೇಶ

ಬಿಸಿಸಿಐ ಕಚೇರಿಗೆ ಮುತ್ತಿಗೆ: ಶಿವಸೇನೆಯ 10 ಕಾರ್ಯಕರ್ತರ ಬಂಧನ

ಪಾಕಿಸ್ತಾನ ಜೊತೆಗೆ ಕ್ರಿಕೆಟ್ ಸರಣಿ ನಡೆಸಲು ಮುಂದಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಚೇರಿಗೆ ಮುತ್ತಿಗೆ ಹಾಕಿದ್ದ ಶಿವಸೇನೆಯ 10...

ಮುಂಬೈ: ಪಾಕಿಸ್ತಾನ ಜೊತೆಗೆ ಕ್ರಿಕೆಟ್ ಸರಣಿ ನಡೆಸಲು ಮುಂದಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಚೇರಿಗೆ ಮುತ್ತಿಗೆ ಹಾಕಿದ್ದ ಶಿವಸೇನೆಯ 10 ಕಾರ್ಯಕರ್ತರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಇಂದು ಬೆಳಗ್ಗೆ ಬಿಸಿಸಿಐ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ, ಭಿತ್ತಿಚಿತ್ರ ಪ್ರದರ್ಶಿಸಿ ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಶಿವಸೇನೆ ಕಾರ್ಯಕರ್ತರ ಬಂಧಿಸಿ, ಅವರ ವಿರುದ್ಧ ಐಪಿಸಿ ಸೆಕ್ಷನ್ 141, 143, 149 ಅಡಿ ಕೇಸ್ ದಾಖಲಿಸಿದ್ದಾರೆ.

ಬಿಸಿಸಿಐ ಅಧ್ಯಕ್ಷ ಶಶಾಂಕ್‌ ಮನೋಹರ್‌ ಅವರಿಗೂ ಮುತ್ತಿಗೆ ಹಾಕಿದ್ದ ಶಿವಸೇನೆ ಕಾರ್ಯಕರ್ತರು, ಅವರಿಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು. ಅಲ್ಲದೆ ಯಾವುದೇ ಕಾರಣಕ್ಕೂ ಭಾರತ ಪಾಕ್‌ ನಡುವೆ ಕ್ರಿಕೆಟ್‌ ಸರಣಿ ಆಯೋಜಿಸ ಬಾರದು ಎಂದು ಒತ್ತಾಯಿಸಿದ್ದರು.

ಭಾರತ-ಪಾಕ್ ಕ್ರಿಕೆಟ್‌ ಸರಣಿ ನಡೆಸುವ ಸಲುವಾಗಿ ಶಶಾಂಕ್‌ ಮನೋಹರ್‌ ಮತ್ತು ಶಹರಿಯಾರ್‌ ಖಾನ್‌ ಅವರ ಮಾತುಕತೆ ನಿಗದಿಯಾಗಿತ್ತು. ಆದರೆ ಶಿವಸೇನೆ ಕಾರ್ಯಕರ್ತರು ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪಿಸಿಬಿ-ಬಿಸಿಸಿಐ ಸಭೆಯನ್ನು ನಾಳೆ ದೆಹಲಿಯ ಬಿಸಿಸಿಐ ಕಚೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!