ಕೌಟುಂಬಿಕ ಕಲಹ: ಯೋಧನಿಂದ ಗುಂಡಿನ ದಾಳಿ, 5 ಸಾವು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಭಾರತೀಯ ಯೋಧರೊಬ್ಬರು ಮನಸೋಯಿಚ್ಛೆ ಗುಂಡಿನ ದಾಳಿ ನಡೆಸಿ ನಾಲ್ವರನ್ನು ಹತ್ಯೆ ಮಾಡಿ ಬಳಿಕ ತಾನು ತಲೆಗೆ...
ಸಂಗ್ರೂರ್/ಚಂಡಿಗಢ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಭಾರತೀಯ ಯೋಧರೊಬ್ಬರು ಮನಸೋಯಿಚ್ಛೆ ಗುಂಡಿನ ದಾಳಿ ನಡೆಸಿ ನಾಲ್ವರನ್ನು ಹತ್ಯೆ ಮಾಡಿ ಬಳಿಕ ತಾನು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಾಲ್ವರು ಕುಟುಂಬಸ್ಥರನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಯೋಧನನ್ನು 25 ವರ್ಷದ ಜಗದೀಪ್ ಸಿಂಗ್ ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಜಗದೀಪ್ ಸಿಂಗ್ ತನ್ನ ಮನೆಯ ಮಹಡಿಗೆ ಹೋಗಿ ದಿಢೀರನೇ ಗುಂಡಿನ ದಾಳಿ ಆರಂಭಿಸಿದ. ಈ ದಾಳಿಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದಂತೆ 4 ಮಂದಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿರುವುದಾಗಿ ಚಂಡೀಗಢ ಪೊಲೀಸ್ ಮೂಲಗಳು ತಿಳಿಸಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.