ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನ.20ಕ್ಕೆ ಆರಂಭವಾಗುವ ಸಾಧ್ಯತೆಯಿದೆ. ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಚಿವ ಸಮಿತಿ ಬುಧವಾರ ಸಭೆ ಸೇರಲಿದ್ದು, ಅಧಿವೇಶನ ಆರಂಭದ ದಿನಾಂಕ ಅಲ್ಲಿ ನಿರ್ಣಯವಾಗಲಿದೆ.
ಕಳೆದ ಅಧಿವೇಶನ ಸಮರ್ಪಕವಾಗಿ ನಡೆಯಲು ಕಾಂಗ್ರೆಸ್ ಅನುವು ಮಾಡಿಕೊಟ್ಟಿರಲಿಲ್ಲ. ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿಗೆ ದೇಶದಾಚೆ ಪಾರಾಗಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಾಜಸ್ಥಾನ ಸಿಎಂ ವಸುಂಧರಾ ರಾಜೆ ರಾಜಿನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಅಧಿವೇಶನದುದ್ದಕ್ಕೂ ಪ್ರತಿಭಟನೆ ನಡೆಸಿತ್ತು.
ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ಹಿಂಸೆ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬರುವ ಸಾಧ್ಯತೆ ದಟ್ಟವಾಗಿದೆ.