ಪ್ರತಿಭಟನಾನಿರತ ಗ್ರಾಮಸ್ಥರು 
ದೇಶ

ಹರಿಯಾಣ ದಲಿತ ದಾಳಿ: ಗ್ರಾಮಸ್ಥರಿಂದ ಮಕ್ಕಳ ಮೃತದೇಹವಿಟ್ಟು ಪ್ರತಿಭಟನೆ

ಹರಿಯಾಣದಲ್ಲಿ ದಲಿತ ಕುಟುಂಬವೊಂದರ ಅಮಾಯಕ ಮಕ್ಕಳಿಬ್ಬರನ್ನು ಜೀವಂತ ಸುಟ್ಟು ಹಾಕಿದ ಘಟನೆಯನ್ನು ಖಂಡಿಸಿ ಗ್ರಾಮಸ್ಥರು...

ಫರೀಬಾದಬಾದ್: ಹರಿಯಾಣದಲ್ಲಿ ದಲಿತ ಕುಟುಂಬವೊಂದರ ಅಮಾಯಕ ಮಕ್ಕಳಿಬ್ಬರನ್ನು ಜೀವಂತ ಸುಟ್ಟು ಹಾಕಿದ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಬುಧವಾರ ರಸ್ತೆಯಲ್ಲಿ ಮಕ್ಕಳ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಕ್ಕಳ ಶವಸಂಸ್ಕಾರ ಮಾಡಲು ನಿರಾಕರಿಸಿರುವ ಸುನ್‌ಪದ್ ಗ್ರಾಮಸ್ಥರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬಲ್ಲಾಭ್ ಗರ್- ಫರೀದಾಬಾದ್ ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ಸೋಮವಾರ ತಡರಾತ್ರಿ ದೆಹಲಿಯ ಹೊರವಲಯದ ಸುನ್‌ಪದ್ ಗ್ರಾಮದಲ್ಲಿ ನೆಲೆಸಿರುವ ಜಿತೇಂದ್ರ-ರೇಖಾ ದಂಪತಿ ಮನೆಗೆ ಹೊರಗಿನಿಂದ ಚಿಲಕ ಹಾಕಿದ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಮಕ್ಕಳು ಸಜೀವ ದಹನವಾಗಿದ್ದು, ಪೋಷಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು.

ಮೇಲ್ವರ್ಗದವರೊಂದಿಗೆ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!