ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿವೆ.
ವರದಿಗಳ ಪ್ರಕಾರ, ಎನ್‌ಕೌಂಟರ್ ಕಾರ್ಯಾಚರಣೆ ಮುಂದುವರೆದಿದ್ದು, ಬಾರಾಮುಲ್ಲಾ ಜಿಲ್ಲೆಯ ತಂಗಮಾರ್ಗ್‌ಗ ಕುಂಝರ್ ಪ್ರದೇಶದಲ್ಲಿ ಇನ್ನೂ ಕೆಲವು ಉಗ್ರರು ಅಡಗಿ ಕುಳಿತಿದ್ದಾರೆ.
ಎನ್‌ಕೌಂಟರ್ ವೇಳೆ ಇಬ್ಬರು ಯೋಧರು ಸಹ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.