ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಮುಖಂಡ ರಾಮ್ ದಾಸ್ ಅಠಾವಳೆ 
ದೇಶ

ಆತ್ಮರಕ್ಷಣೆಗಾಗಿ ದಲಿತರಿಗೆ ಬಂದೂಕು ನೀಡಬೇಕು: ಆರ್ ಪಿ ಐ ಮುಖಂಡ

ದಲಿತರ ಮೇಲೆ ಹೆಚ್ಚುತ್ತಿರುವ ದಾಳಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ದಲಿತರಿಗೆ ಆತ್ಮರಕ್ಷಣೆಗಾಗಿ ಬಂದೂಕುಗಳನ್ನು ನೀಡಬೇಕೆಂದು ಹೇಳಿದ್ದಾರೆ.

ಮುಂಬೈ: ದಲಿತರ ಮೇಲೆ ಹೆಚ್ಚುತ್ತಿರುವ ದಾಳಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ದಲಿತರಿಗೆ ಆತ್ಮರಕ್ಷಣೆಗಾಗಿ ಬಂದೂಕುಗಳನ್ನು ನೀಡಬೇಕೆಂದು ಹೇಳಿದ್ದಾರೆ.
ಪೊಲೀಸ್ ಇಲಾಖೆ ಹಾಗೂ ಸರ್ಕಾರ ದಲಿತರ ಮೇಲೆ ನಡೆಯುತ್ತಿರುವ ದಾಳಿಗಳನ್ನು ತಡೆಯಲು ವಿಫಲವಾಗಿವೆ. ದಲಿತರನ್ನು ರಕ್ಷಣೆ ಮಾಡಲು ಸಾಧ್ಯವಿಲ್ಲ ಎಂದಾದಲ್ಲಿ ದಲಿತರಿಗೆ ಪರವಾನಗಿ ಇರುವ ಬಂದೂಕುಗಳನ್ನು ನೀಡಬೇಕು ಎಂದು ಆರ್.ಪಿ.ಐ ಅಧ್ಯಕ್ಷ ರಾಮ್ ದಾಸ್ ಅಠಾವಳೆ ಒತ್ತಾಯಿಸಿದ್ದಾರೆ.
ಯುಪಿಎ ಸರ್ಕಾರ ಇದ್ದಾಗಲೂ ದಲಿತರ ಮೇಲೆ ದಾಳಿಗಳು ನಡೆದಿತ್ತು. ಎನ್.ಡಿ.ಎ ಸರ್ಕಾರ ಬಂದ ಮೇಲೂ ದಾಳಿ ಮುಂದುವರೆದಿದೆ. ಅದ್ದರಿಂದ ದಲಿತರಿಗೆ ಆತ್ಮ ರಕ್ಷಣೆ ಮಾಡಿಕೊಳ್ಳುವುದನ್ನು ಬೇರೆ ಮಾರ್ಗವಿಲ್ಲ ಎಂದಿದ್ದಾರೆ. ಇದೇ ವೇಳೆ ದಲಿತರ ಹತ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿ.ಕೆ ಸಿಂಗ್ ಅವರ ಹೇಳಿಕೆ ಬಗ್ಗೆ ಆಕ್ರೋಶಗೊಂಡಿದ್ದು, ಮಾಜಿ ಸೇನಾ ಮುಖ್ಯಸ್ಥರಾಗಿದ್ದ ವಿ.ಕೆ ಸಿಂಗ್, ದಲಿತರನ್ನು ನಾಯಿಗೆ ಹೋಲಿಕೆ ಮಾಡಬಾರದು ಈ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!