ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುತ್ತಿರುವ ಪ್ರಧಾನಿ ಮೋದಿ. 
ದೇಶ

ಗಾಂಧೀಜಿಯವರ ಆದರ್ಶಗಳು ಇಂದಿಗೂ ಪ್ರಸ್ತುತ: ಪ್ರಧಾನಿ ಮೋದಿ

ನಮ್ಮ ದೇಶದ ಪಿತಾಮಹ ಎಂದೇ ಖ್ಯಾತರಾದ ಮಹಾತ್ಮಾ ಗಾಂಧಿಯವರ ತತ್ವ ಮತ್ತು ಅವರ ಮಾರ್ಗದರ್ಶನಗಳು...

ನವದೆಹಲಿ: ನಮ್ಮ ದೇಶದ ಪಿತಾಮಹ  ಮಹಾತ್ಮಾ ಗಾಂಧಿಯವರ ಆದರ್ಶ ಮತ್ತು ಅವರ ಮಾರ್ಗದರ್ಶನಗಳು ಇಂದಿಗೂ ಪ್ರಸ್ತುತ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ವಿಶ್ವಸಂಸ್ಥೆಯ 70ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಅವರು ನೀಡಿರುವ ಸಂದೇಶ ಇತ್ತೀಚೆಗೆ ಉತ್ತರ ಪ್ರದೇಶ ಮತ್ತು ಹರ್ಯಾಣ ರಾಜ್ಯಗಳಲ್ಲಿ ನಡೆದ ಹಿಂಸಾಚಾರ ಸಂದರ್ಭದಲ್ಲಿ ಮುಖ್ಯವಾಗುತ್ತದೆ.

ವಿಶ್ವಸಂಸ್ಥೆಯ ದಿನದ ಅಂಗವಾಗಿ ಎಲ್ಲರಿಗೂ ಶುಭಾಶಯ. ವಿಶ್ವದ ರಾಷ್ಟ್ರಗಳಲ್ಲಿ ಶಾಂತಿ ನೆಲೆಸಲು, ಮಾನವೀಯತೆಯನ್ನು ಸಾರುವಲ್ಲಿ ವಿಶ್ವಸಂಸ್ಥೆಯ ಪಾತ್ರ ಮುಖ್ಯ ಎಂದು ಹೇಳಿದ್ದಾರೆ.

ಅಂದು ಮಹಾತ್ಮಾ ಗಾಂಧೀಜಿಯವರು ಹೇಳಿಕೊಟ್ಟ ತತ್ವ-ಆದರ್ಶಗಳು, ತೋರಿಸಿಕೊಟ್ಟ ಮಾರ್ಗ ಇಂದಿನ ಜನಾಂಗಕ್ಕೂ ಪ್ರಸ್ತುತವಾಗಿದೆ. ವಿಶ್ವಸಂಸ್ಥೆಯ ತತ್ವ, ಸಂದೇಶಗಳು ಕೂಡ ಇದೇ ಆಗಿದೆ ಎಂದು ಪ್ರಧಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶ್ವಸಂಸ್ಥೆಯ ಅನೇಕ ಅಭಿಯಾನಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. ಅದರ ಕಾರ್ಯಕ್ರಮಗಳಲ್ಲಿ ಭಾರತ ತನಗೆ ಸಾಧ್ಯವಾದಷ್ಟು ಬೆಂಬಲ ನೀಡಬೇಕಾದುದು ಅಗತ್ಯ ಎಂದು ಸಾರಿದ್ದಾರೆ.

ವಿಶ್ವಸಂಸ್ಥೆ ದಿನಾಚರಣೆ ಅಂಗವಾಗಿ ಇಂದು ರಾತ್ರಿ ವಿಶ್ವಾದ್ಯಂತ ಇರುವ ಸಾಂಪ್ರದಾಯಿಕ ಕಟ್ಟಡಗಳು ನೀಲಿ ಬಣ್ಣದಲ್ಲಿ ಪ್ರಜ್ವಲಿಸಲಿದ್ದು, ಭಾರತ ದೇಶದಲ್ಲಿ ಗುಜರಾತ್ ನ ಅಹಮದಾಬಾದ್ ನ ಸಬರ್ ಮತಿ ಆಶ್ರಮ ನೀಲಿ ಬಣ್ಣದಿಂದ ಕಂಗೊಳಿಸಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT