ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: 2 ಗಾಯ (ಸಾಂದರ್ಭಿಕ ಚಿತ್ರ) 
ದೇಶ

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: 2 ಗಾಯ

ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಜಮ್ಮುವಿನ ಸಾಂಬಾ ಸೆಕ್ಟರ್ ನ 14 ಭಾರತೀಯ ನೆಲೆಗಳನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೈನಿಕರು ಕಳೆದೆರಡು ದಿನಗಳಿಂದಲೂ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಇಬ್ಬರು...

ಜಮ್ಮು: ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಜಮ್ಮುವಿನ ಸಾಂಬಾ ಸೆಕ್ಟರ್ ನ 14 ಭಾರತೀಯ ನೆಲೆಗಳನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೈನಿಕರು ಕಳೆದೆರಡು ದಿನಗಳಿಂದಲೂ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಇಬ್ಬರು ನಾಗರೀಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಪಡೆಗಳು ದಿಟ್ಟ ಉತ್ತರ ನೀಡುತ್ತಿದ್ದು, ಪ್ರಸ್ತುತ ಸಾಂಬಾ ಸೆಕ್ಟರ್ ನಲ್ಲಿ ಗುಂಡಿನ ಕಾಳಗ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಕಳೆದೆರಡು ದಿನಗಳಿಂದಲೂ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ನಿನ್ನೆ ನಡೆಸಿದ ಗುಂಡಿನ ದಾಳಿಗೆ ಸಾಂಬಾ ಸೆಕ್ಟರ್ ಪ್ರದೇಶದಲ್ಲಿ ಓರ್ವ ನಾಗರೀಕ ಸಾವನ್ನಪ್ಪಿದ್ದನ್ನಲ್ಲದೇ, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದರು.

ಕದನ ವಿರಾಮ ಉಲ್ಲಂಘನೆ ಕುರಿತಂತೆ ಶುಕ್ರವಾರ ಹೇಳಿಕೆ ನೀಡಿದ್ದ ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು, ಭಾರತೀಯ ಪಡೆಗಳ ಶಸ್ತ್ರಾಸ್ತ್ರಗಳು ದುರಸ್ಥಿಯಲ್ಲಿದ್ದ ಸಂದರ್ಭದಲ್ಲಿ ಪಾಕಿಸ್ತಾನದ ಪಡೆಗಳು ಭಾರತೀಯ ಯೋಧರ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿ ವೇಳೆ ಓರ್ವ ನಾಗರೀಕ ಸಾವನ್ನಪ್ಪಿದ್ದಾನೆ. ಪಾಕಿಸ್ತಾನ ಮತ್ತೆ ತನ್ನ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವ ಕೆಲಸಗಳನ್ನು ಮಾಡುತ್ತಿದೆ. ಹೀಗಾಗಿಯೇ ಶಸ್ತ್ರಾಸ್ತ್ರ ಆಮದು ಮಾಡಿಕೊಳ್ಳುವುದನ್ನು ಕಳೆದುಕೊಂಡಿದೆ ಎಂದು ಹೇಳಿದ್ದರು.

ಪಾಕಿಸ್ತಾನ ಸೇನೆಕ ಅಪ್ರಚೋದಿತ ದಾಳಿ ಕುರಿತಂತೆ ಖಾಸಗಿ ಮಾಧ್ಯಮದೊಂದಿಗೆ ಹೇಳಿಕೆ ನೀಡಿರುವ ಅಲ್ಲಿನ ಸ್ಥಳೀಯರು, ಗಡಿ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನರು ಇಂದು ಭಯದಿಂದ ಜೀವನ ನಡೆಯುವ ಪರಿಸ್ಥಿತಿ ಎದುರಾಗಿದೆ. ನಮಗೆ ಜೀವದ ಭಯ ಸಾಕಷ್ಟಿದ್ದು, ಕೂಡಲೇ ನಮ್ಮನ್ನು ಬೇರೆಡೆ ಸ್ಥಳಾಂತರಿಸಿ ಎಂದು ಸರ್ಕಾರದ ಬಳಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ