ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ 
ದೇಶ

ದಲಿತರ ವಿರುದ್ಧ ವಿಕೆ ಸಿಂಗ್ ವಿವಾದಾತ್ಮಕ ಹೇಳಿಕೆ: ಯುವ ಕಾಂಗ್ರೆಸ್ ಪ್ರತಿಭಟನೆ

ದಲಿತರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ...

ನವದೆಹಲಿ: ದಲಿತರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 
ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ವಿಕೆ ಸಿಂಗ್ ವಿವಾದಾತ್ಮಕ ಹೇಳಿಕೆ ಪರಂಪರೆ ಮತ್ತು ಸಂಸ್ಕೃತಿಗೆ ವಿರುದ್ಧವಾಗಿದೆ ಎಂಬ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು.
ಹರಿಯಾಣದಲ್ಲಿ ದಲಿತ ಮಕ್ಕಳ  ಹತ್ಯೆ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ವಿ.ಕೆ.ಸಿಂಗ್, ಎಲ್ಲೋ ನಾಯಿಗೆ ಕಲ್ಲು ಹೊಡೆದರೆ ಕೇಂದ್ರವನ್ನು ದೂಷಿಸುವುದು ಸರಿಯಲ್ಲ. ಇಂತಹ ವಿಚಾರಗಳು ಸ್ಥಳೀಯ ಆಡಳಿತದ ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿಕೆ ನೀಡಿದ್ದರು. ಸಿಂಗ್ ಅವರ ಹೇಳಿಕೆ ರಾಷ್ಟ್ರಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ತಮ್ಮ ಅಚಾತುರ್ಯ ಅರಿತ ವಿಕೆ ಸಿಂಗ್ ಬಳಿಕ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ