ಬಾಲಿವುಡ್ ನಟ ಶಾರುಖ್ ಖಾನ್ (ಸಂಗ್ರಹ ಚಿತ್ರ) 
ದೇಶ

ಕೆಕೆಆರ್ ಷೇರು ಅವ್ಯವಹಾರ ಆರೋಪ: ನಟ ಶಾರುಖ್'ಗೆ ಇಡಿ ಸಮನ್ಸ್

ಐಪಿಎಲ್'ನ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಮಾಲೀಕರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರು ಷೇರು ವರ್ಗಾವಣೆ ಮಾಡುವಲ್ಲಿ ಅವ್ಯವಹಾರ ಮಾಡಿದ್ದಾರೆಂಬ ಆರೋಪದ...

ಮುಂಬೈ: ಐಪಿಎಲ್'ನ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಮಾಲೀಕರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರು ಷೇರು ವರ್ಗಾವಣೆ ಮಾಡುವಲ್ಲಿ ಅವ್ಯವಹಾರ ಮಾಡಿದ್ದಾರೆಂಬ ಆರೋಪದ ಕೇಳಿಬಂದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಯಲಯವು ಮಂಗಳವಾರ ಸಮನ್ಸ್ ಜಾರಿ ಮಾಡಿರುವುದಾಗಿ ತಿಳಿದುಬಂದಿದೆ.

ಕೆಕೆಆರ್ ತಂಡದ ಸಹಪಾಲುದಾರರರಾಗಿರುವ ನಟಿ ಜೂಹಿ ಚಾವ್ಲಾ ಮತ್ತು ಅವರ ಪತಿ ಜಯ್ ಮೆಹ್ತಾ ಅವರ ಸೀ ಐಲೆಂಡ್ ಇನ್ವೆಸ್ಟ್ ಮೆಂಟ್ಸ್ ಲಿಮಿಟೆಡ್ ಕಂಪನಿಗೆ ನಟ ಶಾರುಖ್ ಅವರು ಕೆಕೆಆರ್ ತಂಡದ ಷೇರುಗಳನ್ನು ವರ್ಗಾವಣೆ ಮಾಡಿದ್ದರು. ಷೇರು ವರ್ಗಾವಣೆ ಪ್ರಕ್ರಿಯೆಯಲ್ಲಿ ಶಾರುಖ್ ಅವರು ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘಿಸಿರುವುದಾಗಿ ಆರೋಪಗಳು ಕೇಳಿಬಂದಿತ್ತು. ಹೀಗಾಗಿ ಈ ಹಿಂದೆ ಜಾರಿ ನಿರ್ದೇಶನಾಲಯವು ನಟಿ ಜೂಹಿ ಜಾವ್ಹಾ, ಪತಿ ಜಯ್ ಮೆಹ್ತಾ ಹಾಗೂ ಶಾರುಖ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.

ಜಾರಿ ನಿರ್ದೇಶನಾಲಯದ ನಿರ್ದೇಶನದಂತೆ ಜೂಹಿ ಚಾವ್ಲಾ ಮತ್ತು ಜಯ್ ಮೆಹ್ತಾ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡಿದ್ದರು. ಆದರೆ, ನಟ ಶಾರುಖ್ ಖಾನ್ ಮಾತ್ರಿ ಚಿತ್ರೀಕರಣದಲ್ಲಿ ಮಗ್ನರಾಗಿರುವುದರಿಂದ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಇದೀಗ ಜಾರಿ ನಿರ್ದೇಶನಾಲಯವು ಮತ್ತೆ ಶಾರುಖ್ ಖಾನ್ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT