ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ತಂತ್ರ-ಮಂತ್ರಗಳಿಂದ ಏನೂ ಸಾಧ್ಯವಿಲ್ಲ: ಮೋದಿ

ಬಿಹಾರ ವಿಧಾನಸಭೆಗೆ ನಾಳೆ ನಡೆಯಲಿರುವ ನಾಲ್ಕನೇ ಹಂತದ ಚುನಾವಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ...

ಪಾಟ್ನಾ: ಬಿಹಾರ ವಿಧಾನಸಭೆಗೆ ನಾಳೆ ನಡೆಯಲಿರುವ ನಾಲ್ಕನೇ ಹಂತದ ಚುನಾವಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ನಾಲ್ಕು ಕಡೆಗಳಲ್ಲಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಿ ಭಾಷಣ ಮಾಡುತ್ತಿದ್ದಾರೆ. ಅವರ ಇದುವರೆಗಿನ ಭಾಷಣದ ಹೈಲೈಟ್ ಗಳು

  • ಇಂದು ಅವರು ಮೊದಲ ಬಾರಿಗೆ ಸಿತಮರ್ಹಿಯಲ್ಲಿ ಭಾಷಣ ಮಾಡಿದರು. ಅಲ್ಲಿ ಬಿಹಾರ ರಾಜ್ಯಕ್ಕೆ ಅಗತ್ಯವಾದ ತಮ್ಮ ಆರು ಅಂಶಗಳ ದೂರದೃಷ್ಟಿ ಕಾರ್ಯಕ್ರಮಗಳಾದ ವಿದ್ಯುತ್, ನೀರು, ರಸ್ತೆ, ಶಿಕ್ಷಣ, ಉದ್ಯೋಗ ಮತ್ತು ಔಷಧ ಜನರಿಗೆ ಅಗತ್ಯ ಎಂದರು.
  •  ಬಿಹಾರದ ಎಲ್ಲಾ ಜನತೆಗೆ ಇನ್ನು ಐದು ವರ್ಷಗಳೊಳಗೆ ಮನೆಗಳನ್ನು ಒದಗಿಸುವುದು ಬಿಜೆಪಿ ಸರ್ಕಾರದ ಆದ್ಯತೆಗಳಲ್ಲಿ ಪ್ರಮುಖವಾದುದು.
  •  ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಂತ್ರ-ತಂತ್ರಗಳಿಂದ ರಾಜಕೀಯ ಪಕ್ಷಗಳಿಗೆ ತಮ್ಮ ತಪ್ಪುಗಳಿಂದ ಹೊರಬರಲು ಸಾಧ್ಯವಿದೆಯೇ? ಎಂದು ಪ್ರಶ್ನಿಸಿದರು, ಬಿಹಾರವನ್ನು 21ನೇ ಶತಮಾನಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಬೇಕೇ ಹೊರತು 18ನೇ ಶತಮಾನಕ್ಕೆ ಕೊಂಡು ಹೋಗಲು ಬಿಡುವುದಿಲ್ಲ ಎಂದು ಮೋದಿ ಹೇಳಿದರು.
  •  ಬಿಹಾರಕ್ಕೆ 50 ಸಾವಿರ ಕೋಟಿ ರೂಪಾಯಿ ನೀಡುವುದಾಗಿ ಅಧಿಕಾರಕ್ಕೆ ಬರುವ ಮೊದಲು ಭರವಸೆ ನೀಡಿತ್ತು. ಆದರೆ ನಾವು ಅಧಿಕಾರಕ್ಕೆ ಬಂದ ನಂತರ ಇಲ್ಲಿನ ಅಭಿವೃದ್ದಿಗೆ 1.65 ಲಕ್ಷ ಕೋಟಿ ನೀಡಿದ್ದೇವೆ.
  • ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬ. ಇದರಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಮುಂದಿನ ದಿನಗಳಲ್ಲಿ ಬಿಹಾರವನ್ನು ಹೇಗೆ ಅಭಿವೃದ್ಧಿಪಡಿಸುತ್ತೇವೆ ಎಂಬುದು. ಈ ಚುನಾವಣೆ ಬಿಹಾರದ ಭವಿಷ್ಯವನ್ನು ನಿರ್ಧರಿಸುತ್ತದೆ. ಆದುದರಿಂದ ಬಿಹಾರ ಜನತೆಯೇ ಭವಿಷ್ಯದ ಆಡಳಿತದಾರರನ್ನು ಆಯ್ಕೆ ಮಾಡಬೇಕು.
  • ನಮ್ಮ ಎದುರಾಳಿಗಳು ನಮ್ಮ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ.   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್