ಗುಜರಾತ್: ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಹಾರ್ದಿಕ್ ಪಟೇಲ್ ಗೆ ಭಾರಿ ಹಿನ್ನಡೆಯಾಗಿದೆ. ತನ್ನ ವಿರುದ್ಧ ದಾಖಲಾಗಿರುವ ದೇಶದ್ರೋಹ ಅರ್ಜಿಯನ್ನು ವಜಾಗೊಳಿಸಬೇಕೆಂದು ಕೋರಿ ಪಟೇಲ್ ಮೀಸಲಾತಿ ಸಮಿತಿ ಮುಖ್ಯಸ್ಥ ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.
ಪಟೇಲ್ ಸಮುದಾಯದವರು ಆತ್ಮಹತ್ಯೆ ಮಾಡಿಕೊಳ್ಳುವುದರ ಬದಲು ಪೊಲೀಸರನ್ನು ಹತ್ಯೆ ಮಾಡಬೇಕು ಎಂಬ ಪ್ರಚೋದನಕಾರಿ ಹೇಳಿಕೆಯನ್ನು ಹಾರ್ದಿಕ್ ಪಟೇಲ್ ನೀಡಿದ್ದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಅಕ್ಟೋಬರ್ 19ರಂದು ಹಾರ್ದಿಕ್ ಪಟೇಲ್ ರನ್ನು ಬಂಧಿಸಿದ್ದರು.
ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ಚಳುವಳಿಗೆ ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಪುಲ್ ದೇಸಾಯ್ ಘೋಷಿಸಿದ್ದರು. ಈ ವಿಪುಲ್ ದೇಸಾಯ್ ಅವರೊಂದಿಗೆ ದೂರವಾಣಿ ಮೂಲಕ ಹಾರ್ದಿಕ್ ಸಂಭಾಷಣೆ ನಡೆಸಿದ್ದರು. ಅದರಲ್ಲಿ, ನಿಮಗೆ ಧೈರ್ಯವಿದ್ದರೆ ಆತ್ಮಹತ್ಯೆ ಮಾಡಿಕೊಳ್ಳದೇ, ಹೋಗಿ ಪೊಲೀಸರನ್ನು ಹತ್ಯೆ ಮಾಡಿ ಎಂದಿದ್ದರು.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ಹಾರ್ದಿಕ್ ಪಟೇಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಇಂದು ವಿಚಾರಣೆ ನಡೆಸಿದೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ್ದು, ತನಿಖೆಯನ್ನು ಮುಂದುವರೆಸುವಂತೆ ಪೊಲೀಸರಿಗೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics