ಚೆನ್ನೈ: ಯುವತಿಯ ಮೇಲೆ ಆ್ಯಸಿಡ್ ಎರಚಿ ಹತ್ಯೆ ಮಾಡಿದ್ದ ಅಪರಾಧಿಗೆ ಚೆನ್ನೈ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
2013ರಲ್ಲಿ 21 ವರ್ಷದ ಯುವತಿ ಮದುವೆಯಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ಅವಳ ಮುಖದ ಮೇಲೆ ಆ್ಯಸಿಡ್ ಎರಚಿದ್ದನು. ತೀವ್ರವಾಗಿ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದಳು.
ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.