ದೇಶ

ಸಮುದಾಯಗಳ ನಡುವೆ ಕೋಮುಸಂಘರ್ಷ ಮೂಡಿಸುವುದು ಬಿಜೆಪಿ ಅಜೆಂಡಾ: ರಾಹುಲ್ ಗಾಂಧಿ

Shilpa D

ಪಾಟ್ನಾ: ಕೇಂದ್ರದಲ್ಲಿ ಅಸ್ಥಿತ್ವದಲ್ಲಿರುವ ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ ವಿವಿಧ ಸಮುದಾಯಗಳ ನಡುವೆ ಒಡಕು ಮೂಡಿಸಿ, ದ್ವೇಷಾಸೂಯೆ ಬಿತ್ತುವ ಯೋಜನೆ ರೂಪಿಸುತ್ತಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪಾಟ್ನಾದ ಮಧುಬನಿಯಲ್ಲಿ ಬಿಹಾರ ನಾಲ್ಕನೇ ಹಂತದ ಚುನಾವಣೆ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ  ರಾಹುಲ್ ಗಾಂಧಿ, ಹೋದ ಕಡೆಯಲ್ಲೆಲ್ಲಾ ಮೋದಿ ಜನತೆಯ ದಾರಿ ತಪ್ಪಿಸುವ ಮಾತುಗಳನ್ನಾಡುತ್ತಿದ್ದಾರೆ. ಬಿಹಾರದಲ್ಲಿ ಮೈತ್ರಿ ಪಕ್ಷಗಳ ಬಗ್ಗೆ ಮೋದಿ ಅತ್ಯಂತ ಕೆಟ್ಟ ರೀತಿಯಲ್ಲಿ ಟೀಕಿಸುತ್ತಿದ್ದಾರೆ ಎಂದು ದೂರಿದರು.

ಇನ್ನು ಸಮುದಾಯಗಳನ್ನು ಒಡೆದು ಆಳುವುದು ಬಿಜೆಪಿಯ ಪ್ರಮುಖ ಅಜೆಂಡವಾಗಿದೆ ಎಂದು ರಾಹುಲ್ ಆಪಾದಿಸಿದ್ದಾರೆ.

SCROLL FOR NEXT