ಇಂದ್ರಾಣಿ ಮುಖರ್ಜಿ (ಸಂಗ್ರಹ ಚಿತ್ರ) 
ದೇಶ

ಇಂದ್ರಾಣಿ ಮುಖರ್ಜಿಗೆ ಡೆಂಗ್ಯೂ ಇಲ್ಲ: ವೈದ್ಯರ ಸ್ಪಷ್ಟನೆ

ದೇಶದಾದ್ಯಂತ ಸಾಕಷ್ಟು ಸಂಚಲನ ಮೂಡಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಯವರು ಡೆಂಗ್ಯೂ ಜ್ವರದಿಂದ ಬಳಲುತ್ತಿಲ್ಲ ಎಂದು ಗುರುವಾರ ವೈದ್ಯರು ಸ್ಪಷ್ಟಪಡಿಸಿದ್ದಾರೆ...

ಮುಂಬೈ: ದೇಶದಾದ್ಯಂತ ಸಾಕಷ್ಟು ಸಂಚಲನ ಮೂಡಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಯವರು ಡೆಂಗ್ಯೂ ಜ್ವರದಿಂದ ಬಳಲುತ್ತಿಲ್ಲ ಎಂದು ಗುರುವಾರ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಜೆಜೆ ಆಸ್ಪತ್ರೆಯ ಮುಖ್ಯಸ್ಥ ಟಿ.ಪಿ.ಲಹಾನೆ ಅವರು, ಇಂದ್ರಾಣಿಯವರ ರಕ್ತದಲ್ಲಿನ ಪ್ಲೇಟ್ಸ್ ಗಳ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಹಾಗೆಂದ ಮಾತ್ರಕ್ಕೆ ಅವರಿಗೆ ಡೆಂಗ್ಯೂ ಜ್ವರವಿಲ್ಲ. ಡೆಂಗ್ಯೂ ಪರೀಕ್ಷೆಯಲ್ಲಿ ಫಲಿತಾಂಶ ನೆಗೆಟಿವ್ ಎಂದು ಬಂದಿದೆ. ಇಂದ್ರಾಣಿ ಅವರಿಗೆ ಇದೀಗ ಜ್ವರ ಹಾಗೂ ಸಂಧಿವಾತವಿದೆ. ಜ್ವರ ಬಂದಾಗಲೂ ಕೆಲವು ಸಮಯದಲ್ಲಿ ರಕ್ತದಲ್ಲಿರುವ ಪ್ಲೇಟ್ಸ್ ಗಳ ಸಂಖ್ಯೆ ಕಡಿಮೆಯಾಗುವ ಸಂಭವವಿರುತ್ತದೆ ಎಂದು ಹೇಳಿದ್ದಾರೆ.

ಇಂದ್ರಾಣಿ ಮುಖರ್ಜಿಯವರಿಗೆ ಚಿಕಿತ್ಸೆ ನೀಡಲಾಗಿದ್ದು, ರಕ್ತದಲ್ಲಿನ ಪ್ಲೇಟ್ಸ್ ಗಳ ಸಂಖ್ಯೆ ಏರಿಕೆಯಾಗಿದೆ. ಇದೀಗ ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆಗಳನ್ನು ನೀಡಲಾಗಿದ್ದು, ಎಲ್ಲಾ ರೀತಿಯ ತಪಾಸಣೆ ಮಾಡಿದ ನಂತರ ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಇದೇ ಅಕ್ಟೋಬರ್ 31ಕ್ಕೆ ಆರೋಪಿ ಇಂದ್ರಾಣಿ ಮುಖರ್ಜಿ, ಅವರ ಪತಿ ಸಂಜೀವ್ ಖನ್ನಾ ಮತ್ತು ಕಾರು ಚಾಲಕ ಶ್ಯಾಮ್ ವರ್ ಅವರ ಬಂಧನದ ಅವಧಿ ಮುಕ್ತಾಯಗೊಳ್ಳಲ್ಲಿದ್ದು, ಈ ಅವಧಿಯೊಳಗೇ ಸಿಬಿಐ ಅಧಿಕಾರಿಗಳು ಧ್ವನಿ ಮಾದರಿ ಸಂಗ್ರಹಕ್ಕೆ ಮುಂದಾಗಿದ್ದರು. ಕಳೆದ ಆಕ್ಟೋಬರ್ 19 ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯ ಈ ಮೂವರು ಆರೋಪಿಗಳನ್ನು ಅಕ್ಟೋಬರ್ 31ರವರೆಗೆ  ಕಸ್ಟಡಿಗೆ ನೀಡಿತ್ತು. ಅಕ್ಟೋಬರ್ 31ಕ್ಕೆ ಈ ಮೂವರ ಬಂಧನ ಮುಕ್ತಾಯಗೊಳ್ಳುವುದರಿಂದ ಸಿಬಿಐ ತನಿಖೆ ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ