ದೇಶ

ದೆಹಲಿ ಸರ್ಕಾರದ ದೆಸ್ಕಾಂ ಸಿಎಜಿ ಆಡಿಟ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

Lingaraj Badiger

ನವದೆಹಲಿ: ದೆಹಲಿಯ ಮೂರು ಖಾಸಗಿ ವಿದ್ಯುತ್ ಸರಬರಾಜು ಕಂಪನಿಗಳ ಖಾತೆಗಳನ್ನು ಸಿಎಜಿಯಿಂದ ಆಡಿಟ್ ಮಾಡಿಸಲು ಮುಂದಾಗಿದ್ದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರಕ್ಕೆ ಭಾರಿ ಹಿನ್ನೆಡೆಯಾಗಿದೆ.

ಸಿಎಜೆ ಲೆಕ್ಕಪರಿಶೋಧನೆಗೆ ದೆಹಲಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಶುಕ್ರವಾರ ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ.

'ದೆಹಲಿ ಸರ್ಕಾರದ ಆದೇಶದ ವಿರುದ್ಧ ಖಾಸಗಿ ಕಂಪನಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನಾಯಮೂರ್ತಿ ಜಿ ರೋಹಿಣಿ ಮತ್ತು ನ್ಯಾಯಮೂರ್ತಿ ಆರ್.ಎಸ್. ಎಂದ್ಲಾವ್ ಅವರು, ಇದುವರೆಗೂ ಸಿಎಜಿ ಕರಡು ಪ್ರತಿಯ ಪ್ರಕಾರವೇ ಲೆಕ್ಕ ಪರಿಶೋಧನಾ ಪ್ರಕ್ರಿಯೆ ನಡೆದಿದೆ. ಹೀಗಾಗಿ ಮತ್ತೊಮ್ಮೆ ನಡೆಸುವ ಅಗತ್ಯ ಇಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಟಾಟಾ ಪವರ್ ದೆಹಲಿ ಡಿಸ್ಟ್ರಿಬ್ಯೂಟರ್ ಲಿ.(ಟಿಪಿಡಿಡಿಎಲ್), ಬಿಎಸ್‌ಇಎಸ್ ರಾಜಧಾನಿ ಪವರ್ ಲಿ. ಮತ್ತು ಬಿಎಸ್‌ಇಎಸ್ ಯಮುನಾ ಪವರ್ ಲಿ. ಕಂಪನಿಗಳು ದೆಹಲಿ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಜನವರಿ 7, 2014ರಂದು ಅರ್ಜಿ ಸಲ್ಲಿಸಿ, ಸರ್ಕಾರದ ಅಧಿಕೃತ ಅಧಿಕಾರಿಗಳು ತಮ್ಮ ಖಾತೆಗಳನ್ನು ಪರಿಶೀಲಿಸುವಂತಿಲ್ಲ ಎಂದು ವಾದಿಸಿದ್ದವು.

SCROLL FOR NEXT