ನವದೆಹಲಿ: ಐದು ಅಂತಸ್ತುಗಳ ಕಟ್ಟಡ ನಿರ್ಮಾಣದ ಅನುಮತಿ ಯನ್ನು ವಜಾ ಮಾಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಕಾನೂನು ಸಚಿವ ಸದಾನಂದಗೌಡರು ಮತ್ತು ಶೃಂಗೇರಿ ಶಾಸಕರ ಜೀವರಾಜ್ ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿದಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ಸದಾನಂದಗೌಡರು ಒಂದು ಕಟ್ಟಡವನ್ನು ನಿರ್ಮಾಣ ಮಾಡಿಕೊಂಡು ಅದನ್ನು ಎರಡಾಗಿ ಪರಿವರ್ತಿಸಿದ್ದರು. ಇದು ಕಟ್ಟಡ ನಿರ್ಮಾಣ ನಿಯಮಗಳಿಗೆ ಉಲ್ಲಂಘನೆಯಾಗಿದೆ ಎಂದು ವಕೀಲೆ ನಾಗಲಕ್ಷ್ಮಿ ಭಾಯಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಕಟ್ಟಡ ನಿರ್ಮಾಣಕ್ಕೆ ನೀಡಿದ್ದ ಅನುಮತಿಯನ್ನೇ ರದ್ದು ಮಾಡಿತ್ತು. ಅಲ್ಲದೆ 3 ತಿಂಗಳಲ್ಲಿ ಇವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಬಿಡಿಎಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸದಾನಂದಗೌಡರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.