ದೇವೇಂದ್ರ ಫಡ್ನವೀಸ್ 
ದೇಶ

ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ನೀಡುವಲ್ಲಿ ಮಹಾರಾಷ್ಟ್ರ ಪ್ರಥಮ: ಫಡ್ನವೀಸ್

ದೇಶದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಅಪರಾಧಿಗಳಿಗೆ ಶಿಕ್ಷೆ ನೀಡುವ ಮೊದಲ ಐದು ರಾಜ್ಯಗಳಲ್ಲಿ ಮಹಾರಾಷ್ಟ್ರ ಸ್ಥಾನ ಪಡೆದುಕೊಂಡಿದೆ ಎಂದು...

ಮುಂಬಯಿ: ದೇಶದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಅಪರಾಧಿಗಳಿಗೆ ಶಿಕ್ಷೆ ನೀಡುವ  ಮೊದಲ ಐದು ರಾಜ್ಯಗಳಲ್ಲಿ ಮಹಾರಾಷ್ಟ್ರ ಸ್ಥಾನ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗುವ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದ್ದು ಮುಂದಿನ ವರ್ಷ ಮಹಾರಾಷ್ಟ್ರ ಸರಕಾರವು ಈ ವಿಷಯದಲ್ಲಿ ದೇಶದಲ್ಲೇ ಅಗ್ರಸ್ಥಾನ ಪಡೆಯಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ನೇತೃತ್ವದ ಸರಕಾರದ ಆಡಳಿತಾವಧಿಯಲ್ಲಿ ಮಹಾರಾಷ್ಟ್ರವು ಈ ಪಟ್ಟಿಯಲ್ಲಿ ಕೊನೆಯ ಎರಡು ಮೂರು ಸ್ಥಾನದಲ್ಲಿತ್ತು. ಕಳೆದ ಆರು ತಿಂಗಳಲ್ಲಿ ಮಹಾರಾಷ್ಟ್ರದಲ್ಲಿನ ಎಲ್ಲ ಪೊಲೀಸ್‌ ಠಾಣೆಗಳು ಆನ್‌ಲೈನ್‌ ಸಂಪರ್ಕ ಹೊಂದಿದ್ದು, ಆನ್ ಲೈನ್ ನಲ್ಲೇ ಎಫ್ ಐ ಆರ್ ದಾಖಲಿಸಲಾಗುತ್ತಿದೆ ಎಂದರು.

ಮುಂಬಯಿ ನಗರದಲ್ಲಿ 6,000 ಸಿಸಿ ಟಿವಿಗಳನ್ನು ಅಳವಡಿಸುವ ಗುರಿ ಹೊಂದಲಾಗಿದ್ದು ಈಗಾಗಲೇ 1,200 ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್