ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮೀಸಲಾತಿ ಬಗ್ಗೆ ಚರ್ಚೆ ನಡೆಸಲು ಸಿದ್ಧವಿರುವುದಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.
ಟ್ವಿಟರ್ ನಲ್ಲಿ ಮೀಸಲಾತಿ ಬಗ್ಗೆ ಬರೆದಿರುವ ನಿತೀಶ್ ಕುಮಾರ್, "ಮೋದಿಜಿ ನಿಮ್ಮೊಂದಿಗೆ ಮೀಸಲಾತಿ ಬಗ್ಗೆ ಚರ್ಚೆ ನಡೆಸಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ. "ಜನರನ್ನು ತಪ್ಪು ದಾರಿಗೆಳೇಯುವುದನ್ನು ಹಾಗೂ ಬಿಹಾರ ಚುನಾವಣೆಗೆ ಕೋಮುವಾದದ ಬಣ್ಣ ನೀಡುವುದನ್ನು ಬಿಡಿ ಎಂದು ಒತ್ತಾಯಿಸಿದ್ದಾರೆ.
ಮೀಸಲಾತಿಯನ್ನು ಪರಿಶೀಲನೆ ಮಾಡುವುದಿಲ್ಲ ಎಂದು ಇತ್ತೀಚೆಗಷ್ಟೆ ಬಿಹಾರದಲ್ಲಿ ಬಿಜೆಪಿ ಅಮಿತ್ ಶಾ ಸ್ಪಷ್ಟಪಡಿಸಿದ್ದರು. ಈಗ ಮತ್ತೆ ಮೀಸಲಾತಿಯ ವಿಷಯದ ಬಗ್ಗೆ ನಿತೀಶ್ ಕುಮಾರ್ ಪ್ರಸ್ತಾಪಿಸಿದ್ದು ಮೋದಿ ಅವರೊಂದಿಗೆ ಮೀಸಲಾತಿ ಬಗ್ಗೆ ಚರ್ಚೆ ನಡೆಸಲು ಯಾವಾಗಲೂ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನವೆಂಬರ್.1 ರಂದು ಬಿಹಾರದಲ್ಲಿ ನಾಲ್ಕನೇ ಹಂತದ ಚುನಾವಣೆ ನಡೆಯಲಿದ್ದು, ನವೆಂಬರ್ 8 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.