ಲಾಲು ಪ್ರಸಾದ್ ಯಾದವ್ 
ದೇಶ

ಮೋದಿ, ಅಮಿತ್ ಶಾ ವಿರುದ್ಧ ಹೇಳಿಕೆ, ಲಾಲು ವಿರುದ್ಧ 2 ಎಫ್‌ಐಆರ್ ದಾಖಲು

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ...

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಎರಡು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಮ್ಯಾಜಿಸ್ಟ್ರೇಟರ್ ವರದಿ ಆಧಾರದ ಮೇಲೆ ಅಮಿತ್ ಶಾ ಅವರನ್ನು ನರಭಕ್ಷಕ ಹಾಗೂ ಹುಚ್ಚ ಎಂದಿದ್ದ ಲಾಲು ವಿರುದ್ಧ ನಿನ್ನೆ ಪಾಟ್ನಾದ ಸಚಿವಾಲಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ಆರ್ ಲಕ್ಷ್ಮಣಯ್ಯ ಅವರು ಹೇಳಿದ್ದಾರೆ.

ಮ್ಯಾಜಿಸ್ಟ್ರೇಟರ್ ಸುಜಿತ್ ಕುಮಾರ್ ಸಿನ್ಹಾ ಅವರ ವರದಿ ಆಧಾರದ ಮೇಲೆ ಅಮಿತ್ ಶಾ ಅವರನ್ನು ನರಭಕ್ಷಕ ಹಾಗೂ ಪ್ರಧಾನಿಯವರನ್ನು ಬ್ರಹ್ಮಪಿಶಾಚಿ ಎಂದಿದ್ದ ಲಾಲು ವಿರುದ್ಧ ಮುಜಾಫರ್‌ನಗರದ ಕಂಠಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ಹಾಗೂ ಜನಪ್ರತಿನಿಧಿ ಕಾಯ್ದೆಯಡಿ ಲಾಲು ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್