(ಸಾಂದರ್ಭಿಕ ಚಿತ್ರ) 
ದೇಶ

ಮಾತು ಕೇಳದೆ ಜೀನ್ಸ್, ಟಿ ಶರ್ಟ್ ಹಾಕಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ!

ಮಾತು ಕೇಳದೆ ಜೀನ್ಸ್, ಟಿ ಶರ್ಟ್ ಹಾಕಿದ್ದಾಳೆಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನೇ ಹತ್ಯೆ ಮಾಡಿರುವ ಘಟನೆಯೊಂದು ಪುಣೆಯ ಗುಲ್ತೆಕಡಿ ಪ್ರದೇಶದಲ್ಲಿ ಶನಿವಾರ ನಡೆದಿದೆ...

ಪುಣೆ: ಮಾತು ಕೇಳದೆ ಜೀನ್ಸ್, ಟಿ ಶರ್ಟ್ ಹಾಕಿದ್ದಾಳೆಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನೇ ಹತ್ಯೆ ಮಾಡಿರುವ ಘಟನೆಯೊಂದು ಪುಣೆಯ ಗುಲ್ತೆಕಡಿ ಪ್ರದೇಶದಲ್ಲಿ ಶನಿವಾರ ನಡೆದಿದೆ.

ರಂಜಿತ್ ನಿಶಾದ್ (24) ಹತ್ಯೆ ಮಾಡಿದ ಆರೋಪಿಯಾಗಿದ್ದು, ಕೆಲವು ದಿನಗಳ ಹಿಂದಷ್ಟೇ ರಂಜಿತ್ ನಿಶಾದ್ ತನ್ನ ಪೂಜಾ ಜೀನ್ ಪ್ಯಾಂಟ್ ಹಾಗೂ ಟಿ ಶರ್ಟ್ ಧರಿಸುವುದನ್ನು ವಿರೋಧಿಸಿದ್ದ. ಇದರ ನಡುವೆಯೂ ಪೂಜಾ ಜೀನ್ಸ್ ಧರಿಸಿರುವುದನ್ನು ಕಂಡ ರಂಜಿತ್ ಕೋಪಗೊಂಡು ಪೂಜಾಳ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ನಂತರ ಮನೆಗೆ ಬೀಗ ಹಾಕಿ ಸ್ಥಳದಿಂದ ಕಾಲ್ಕಿತ್ತಿದ್ದಾನೆಂದು ತಿಳಿದುಬಂದಿದೆ.

ಪಕ್ಕದ ಮನೆಯಿಂದ ಕೊಳೆತ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ರಂಜಿತ್ ನಿಶಾದ್ ಗಾಗಿ ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ಸಕ್ರಿಯ ರಾಜಕೀಯಕ್ಕೆ ಬರುವ ಬಯಕೆ ಬಿಚ್ಚಿಟ್ಟ ಸೈನಾ ನೆಹ್ವಾಲ್; BJPಯಿಂದ ಚುನಾವಣಾ ಅಖಾಡಕ್ಕೆ ಎಂಟ್ರಿ?

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ