ದೇಶ

ರಾಧೆ ಮಾ ವಿರುದ್ಧ ಹೊಸ ಎಫ್‌ಐಆರ್ ದಾಖಲು

Lingaraj Badiger

ಮುಂಬೈ: ವಿವಾದಿತ ದೇವ ಮಹಿಳೆ ರಾಧೆ ಮಾ ವಿರುದ್ಧ ಮುಂಬೈ ಪೊಲೀಸರು ಮಂಗಳವಾರ ಹೊಸ ಎಫ್‌ಐಆರ್ ದಾಖಲಿಸಿದ್ದಾರೆ.

ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಈಗಾಗಲೇ ಪೊಲೀಸ್ ವಿಚಾರಣೆ ಎದುರಿಸುತ್ತಿರುವ ರಾಧೆ ಮಾ ವಿರುದ್ಧ ಟಿವಿ ನಟಿ ಹಾಗೂ ಬಿಗ್‌ಬಾಸ್ ಸ್ಪರ್ಧಿ ಡಾಲಿ ಬಿಂದ್ರಾ ನೀಡಿದ್ದ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಇಂದು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ.

ಅನುಯಾಯಿಯೊಬ್ಬರ ಜತೆ ಲೈಂಗಿಕ ಸಂಬಂಧ ಹೊಂದುವಂತೆ ನನ್ನ ಮೇಲೆ ಒತ್ತಡ ಹೇರಿದ್ದರು. ರಾಧೆ ಮಾ ಸತ್ಸಂಗದಲ್ಲಿ ಇದೆಲ್ಲಾ ಮಾಮೂಲಿ ವಿಷಯ. ಇಂಥ ಕಾರಣಗಳಿಂದಾಗಿಯೇ ಅವರ ಭಕ್ತರ ಸಂಖ್ಯೆ ಹೆಚ್ಚಿದೆ. ಸತ್ಸಂಗದ ಹೆಸರಿನಲ್ಲಿ ಶೋಷಣೆ ನಡೆಯುತ್ತಿದ್ದು, ಒಮ್ಮೆ ಅವರ ಪುತ್ರ ನನ್ನ ಮೇಲೆ ಲೌಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದರು ಎಂದು ಆರೋಪಿಸಿ ಡಾಲಿ ಬಿಂದ್ರಾ ಬೊರಿವಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಸಂಬಂಧ ರಾಧೆ ಮಾ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ವಾಡಿದೆ.

SCROLL FOR NEXT