ಟೈಗರ್ ಮೆಮನ್ (ಸಂಗ್ರಹ ಚಿತ್ರ) 
ದೇಶ

ಪಾಕ್‌ನಲ್ಲಿ 'ನಕಲಿ' ಟೈಗರ್ ಮೆಮನ್ ಬಂಧನ

ಮುಂಬೈ ಸರಣಿ ಬಾಂಬ್ ಸ್ಫೋಟದ ಮಾಸ್ಟರ್‌ಮೈಂಡ್ ಟೈಗರ್ ಮೆಮನ್‌ನ್ನು ಬುಧವಾರ ಪಾಕಿಸ್ತಾನದ ಕರಾಚಿಯಲ್ಲಿ ಬಂಧಿಸಲಾಗಿದೆ ಎಂಬ ಸುದ್ದಿ...

ನವದೆಹಲಿ: ಮುಂಬೈ ಸರಣಿ ಬಾಂಬ್ ಸ್ಫೋಟದ ಮಾಸ್ಟರ್‌ಮೈಂಡ್ ಟೈಗರ್ ಮೆಮನ್‌ನ್ನು ಬುಧವಾರ ಪಾಕಿಸ್ತಾನದ ಕರಾಚಿಯಲ್ಲಿ ಬಂಧಿಸಲಾಗಿದೆ ಎಂಬ ಸುದ್ದಿ ಕೇಳಿದೊಡನೆ ಎಲ್ಲರೂ ಒಂದು ಕ್ಷಣ ಹೌದಾ? ಎಂದು ಉದ್ಗರಿಸಿದ್ದು ನಿಜ.

ಆದರೆ ಬಂಧಿತನಾದದ್ದು ಉಗ್ರ ಟೈಗರ್ ಮೆಮನ್ ಅಲ್ಲ, ನಕಲಿ ಟೈಗರ್ ಮೆಮನ್. ಪಾಕಿಸ್ತಾನದಲ್ಲಿ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಂಧಿತನಾದ ಆ ವ್ಯಕ್ತಿಯ ಹೆಸರು ಫರ್ಕಾನ್.

ಭೂಗತ ದೊರೆ ಟೈಗರ್ ಮೆಮನ್ ಹೆಸರಿನಲ್ಲಿ ಈತ ಹೆಣ್ಮಕ್ಕಳನ್ನು ಚುಡಾಯಿಸುತ್ತಿದ್ದ, ಜನರನ್ನು ಬೆದರಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಇದೀಗ ಪೊಲೀಸರ ಅತಿಥಿಯಾಗಿರುವ ಈತನನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.

1993ರ ಮುಂಬೈ ಸರಣಿ  ಸ್ಫೋಟದಲ್ಲಿ ಪ್ರಧಾನ ಪಾತ್ರ ವಹಿಸಿದ್ದ  ಟೈಗರ್ ಮೆಮನ್ ದುಬೈನಲ್ಲಿ ತಲೆ ಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದ್ದು, ಆತನಿಗಾಗಿ ಇಂಟರ್‌ಪೋಲ್ ಮತ್ತು ಸಿಬಿಐ ಹಲವಾರು ವರ್ಷಗಳಿಂದ ಹುಡುಕಾಟ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್

"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ