ಸೆ.8ಕ್ಕೆ ಸಿಡ್ಲ್ಯೂಸಿ ಸಭೆ: ರಾಹುಲ್ ಗಾಂಧಿ ಪಟ್ಟಕ್ಕೆ ಚಿಂತನೆ
ಕಾಂಗ್ರೆಸ್ ಯುವರಾಜನಿಗೆ ಪಕ್ಷದ ಅಧ್ಯಕ್ಷ ಸ್ಥಾನದ ಪಟ್ಟ ಕಟ್ಟುವ ನಿಟ್ಟಿನಲ್ಲಿ ಕಾಂಗ್ರೆಸ್ ಉತ್ಸುಕವಾಗಿದೆ. ಆದರೆ, ಯುವರಾಜ ರಾಹುಲ್ ಗಾಂಧಿ...
ನವದೆಹಲಿ: ಕಾಂಗ್ರೆಸ್ ಯುವರಾಜನಿಗೆ ಪಕ್ಷದ ಅಧ್ಯಕ್ಷ ಸ್ಥಾನದ ಪಟ್ಟ ಕಟ್ಟುವ ನಿಟ್ಟಿನಲ್ಲಿ ಕಾಂಗ್ರೆಸ್ ಉತ್ಸುಕವಾಗಿದೆ. ಆದರೆ, ಯುವರಾಜ ರಾಹುಲ್ ಗಾಂಧಿ ಹೊಸ ಹೊಣೆಗೆ ಇನ್ನೂ ಸಜ್ಜಾಗಿಲ್ಲ! ಸೆ.8ರಂದು ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಈ ವಿಷಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಸೋನಿಯಾ ಗಾಂಧಿಯರನ್ನೇ ಮುಂದುವರಿಸುವ ಅಥವಾ ರಾಹುಲ್ಗೆ ಬಹುನಿರೀಕ್ಷಿತ ಪಕ್ಷದ ಚುಕ್ಕಾಣಿ ನೀಡುವ ಬಗ್ಗೆ ಗೊಂದಲ ಮುಂದುವರಿದಿರುವ ನಡುವೆಯೇ, ಪಕ್ಷ ಸಿದ್ಧವಿದ್ದರೂ ತಮಗಿನ್ನೂ ಕಾಲಾವಕಾಶ ಬೇಕು ಎಂದು ರಾಹುಲ್ ಗಾಂಧಿ ಹೇಳಿರುವುದಾಗಿ ವರದಿಯಾಗಿದೆ.
ಈ ನಡುವೆ ಬಿಹಾರ ಮತ್ತು ಅಸ್ಸಾಂ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷರ ಸ್ಥಾನ ಬದಲಾವಣೆಯನ್ನು ಮುಂದೂಡುವುದು ಸೂಕ್ತ. ಜೊತೆಗೆ ಪಕ್ಷದ ವಿವಿಧ ಹಂತಗಳ ಪದಾಧಿಕಾರಿಗಳ ಚುನಾವಣೆ ಬಳಿಕವೇ ಅಧ್ಯಕ್ಷರ ಆಯ್ಕೆ ನಡೆಸಬೇಕು ಎಂಬ ಮಾತುಗಳು ಕೂಡ ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.