ನರೇಂದ್ರ ಮೋದಿ 
ದೇಶ

ಆರ್‌ಎಸ್‌ಎಸ್ ಸಂಸ್ಕಾರ ಪ್ರಧಾನಿಯಾಗಲು ನೆರವಾಯಿತು: ಮೋದಿ

ಆರ್‌ಎಸ್‌ಎಸ್-ಬಿಜೆಪಿ ವಾರ್ಷಿಕ ಸಮಸ್ವಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಸ್ವಯಂ ಸೇವಕ ಎಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆಯಾಗುತ್ತದೆ ಎಂದು ಹೇಳಿದ್ದಾರೆ.

ನವದೆಹಲಿ: ಆರ್‌ಎಸ್‌ಎಸ್-ಬಿಜೆಪಿ ವಾರ್ಷಿಕ ಸಮಸ್ವಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಸ್ವಯಂ ಸೇವಕ ಎಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆಯಾಗುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಉತ್ತಮ ಕೆಲಸಗಳನ್ನು ಮಾಡುತ್ತಿದ್ದು ಅದರ ಪರಿಣಾಮ ಶೀಘ್ರವೇ ಕಾಣಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ದೇಶದ ಹಿತದೃಷ್ಟಿಯಿಂದ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು ಅಭಿವೃದ್ಧಿಗೆ ಪೂರಕವಾಗಿದೆ ಎಂದು ಹೇಳಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಎಂದು ಗುರುತಿಸಿಕೊಳ್ಳಲು ಹೆಮ್ಮೆಯಾಗುತ್ತದೆ, ಆರ್.ಎಸ್.ಎಸ್ ಸಂಸ್ಕಾರದಿಂದಲೇ ಪ್ರಧಾನಿಯಾದೆ  ದೇಶದ ಅಭಿವೃದ್ಧಿಗೆ ಆರ್.ಎಸ್.ಎಸ್ ನೀಡುವ ಸಲಹೆಯನ್ನು ಸ್ವೀಕರಿಸುತ್ತೇವೆ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರನ್ನು ಆರ್.ಎಸ್.ಎಸ್ ನಿಯಂತ್ರಿಸುತ್ತಿದೆ ಎಂದು ಕಾಂಗ್ರೆಸ್, ಸಿಪಿಐ(ಎಂ) ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಇದನ್ನು ಅಲ್ಲಗಳೆದಿದ್ದ ಆರ್.ಎಸ್.ಎಸ್, ಕೇಂದ್ರ ಸರ್ಕಾರ ಸರಿ ದಾರಿಯಲ್ಲಿ ನಡೆಯುತ್ತಿದೆ ಸಂಘದಿಂದ ಯಾವುದೇ ಅಜೆಂಡಾ ನೀಡಿಲ್ಲ ಎಂದು ಆರ್.ಎಸ್.ಎಸ್ ಸ್ಪಷ್ಟಪಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!