ನ್ಯಾ,ಎ.ಪಿ.ಶಾಹ್ 
ದೇಶ

ಯಾಕೂಬ್ ಮೆಮನ್, ಅಫ್ಜಲ್ ಗುರುಗೆ ಗಲ್ಲು, ರಾಜಕೀಯ ಪ್ರೇರಿತ: ನ್ಯಾ.ಶಾಹ್

ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರು ಹಾಗೂ 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ಗೆ ಗಲ್ಲು ಶಿಕ್ಷೆ ರಾಜಕೀಯ ಪ್ರೇರಿತ ಎಂದು ದೆಹಲಿ...

ನವದೆಹಲಿ: ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರು ಹಾಗೂ 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ಗೆ ಗಲ್ಲು ಶಿಕ್ಷೆ ರಾಜಕೀಯ ಪ್ರೇರಿತ ಎಂದು ದೆಹಲಿ ಹೈಕೋರ್ಟ್ ನಿವೃತ್ತ ಮುಖ್ಯ ನಾಯಮೂರ್ತಿ ಎ.ಪಿ.ಶಾಹ್ ಅವರು ಹೇಳಿದ್ದಾರೆ.

ಸಿಎನ್‌ಎನ್-ಐಬಿಎನ್ ಸುದ್ದಿವಾಹಿನಿಗೆ ಮಾತನಾಡಿರುವ ಕಾನೂನು ಆಯೋಗದ ಮಾಜಿ ಅಧ್ಯಕ್ಷ, ಅಫ್ಜಲ್ ಗಲ್ಲು ಶಿಕ್ಷೆ ನಿರಾಶೆ ಮೂಡಿಸಿತ್ತು ಎಂದಿದ್ದಾರೆ. ಅಲ್ಲದೆ ಮೆಮನ್ ಕ್ಷಮಧಾನಕ್ಕೆ ಇನ್ನು ಅವಕಾಶ ಇತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೆಮನ್‌ಗೆ ಗಲ್ಲು ಶಿಕ್ಷೆ ಜಾರಿಗೊಳಿಸಿದ ಬಗ್ಗೆ ಪ್ರತಿಕ್ರಿಯಿಸಿದ ಶಾಹ್, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಮಧ್ಯೆಯೇ ಭಿನ್ನಾಭಿಪ್ರಾಯ ಇತ್ತು. ಹೀಗಾಗಿ ಅದನ್ನು ಮತ್ತೊಂದು ಪೀಠಕ್ಕೆ ವರ್ಗಾವಣೆ ಮಾಡಲಾಗಿತ್ತು ಮತ್ತು ಕ್ಷಮಧಾನ ಅರ್ಜಿ ತಿರಸ್ಕಾರಗೊಂಡ ನಂತರ 14 ದಿನಗಳ ಕಾಲಾವಕಾಶ ನೀಡಬೇಕಿತ್ತು ಎಂದಿದ್ದಾರೆ.

ಈ ಎರಡೂ ಪ್ರಕರಣಗಳಲ್ಲಿ ಸರ್ಕಾರ ತುಂಬಾ ಆತುರದ ನಿರ್ಧಾರ ತೆಗೆದುಕೊಂಡಿದ್ದು, ಇದು ರಾಜಕೀಯ ಪ್ರೇರಿತ ಎಂದಿರುವ ಶಾಹ್, ಭಯೋತ್ಪಾದನಾ ಪ್ರಕರಣಗಳಲ್ಲಿ ಗಲ್ಲು ಶಿಕ್ಷೆಯನ್ನು ಒಂದು ನಿರೋಧಕವಾಗಿ ಬಳಸುವ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು