ಅಮಿತ್ ಶಾ 
ದೇಶ

ಕಾಂಗ್ರೆಸ್ ತಮಾಷೆ ಮಾಡುತ್ತಿತ್ತು, ಬಿಜೆಪಿ ಭರವಸೆ ಈಡೇರಿಸಿದೆ: ಒಆರ್ ಒಪಿ ಬಗ್ಗೆ ಅಮಿತ್ ಶಾ

ಸಮಾನ ಶ್ರೇಣಿ, ಸಮಾನ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿರುವ ಎನ್.ಡಿ.ಎ ಸರ್ಕಾರದ ಕ್ರಮವನ್ನು ಐತಿಹಾಸಿಕ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿ: ಸಮಾನ ಶ್ರೇಣಿ, ಸಮಾನ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿರುವ ಎನ್.ಡಿ.ಎ ಸರ್ಕಾರದ ಕ್ರಮವನ್ನು ಐತಿಹಾಸಿಕ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಾವು ನಿವೃತ್ತ ಸೈನಿಕರಿಗೆ ನೀಡಿದ್ದ ಭವರಸೆಯನ್ನು ಈಡೇರಿಸಿ, ಆರ್ಥಿಕ ಭದ್ರತೆಯನ್ನು ಒದಗಿಸಿದ್ದಾರೆ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸೈನಿಕರ ಭದ್ರತೆ ಬಗ್ಗೆ ತಮಾಷೆ ಮಾಡುತ್ತಿತ್ತು ಎಂದು ಅಮಿತ್ ಶಾ ಟೀಕಿಸಿದ್ದಾರೆ.    

ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ನಿವೃತ್ತ ಸೈನಿಕರ ಪಿಂಚಣಿಯನ್ನು ಕಡಿಮೆಗೊಳಿಸಲಾಗಿತ್ತು.  ಅಲ್ಲದೇ ಒಆರ್ ಒಪಿಗೆ ಈ ಹಿಂದಿನ ಯುಪಿಎ ಸರ್ಕಾರ ಕೇವಲ 500 ಕೋಟಿ ರೂಪಾಯಿ ಅನುದಾನ ನೀಡಿತ್ತು ಎಂದು ಅಮಿತ್ ಶಾ ತಿಳಿಸಿದ್ದಾರೆ.
ಸೈನಿಕರಿಗೆ ನಿಡಲಾಗುತ್ತಿದ ವೇತನದ ಶೇ.70 ರಷ್ಟು ಪಿಂಚಣಿಯನ್ನು ಶೇ.50 ಕ್ಕೆ ಇಳಿಸಿದ್ದು ಕಾಂಗ್ರೆಸ್, ದಶಕಗಳಿಂದ ಒಆರ್ ಒಪಿ ಗಾಗಿ ಹೋರಾಟ ನಡೆಯುತ್ತಿದ್ದರೂ, ಯುಪಿಎ ಸರ್ಕಾರ ಕೇವಲ 500 ಕೋಟಿ ಮಾತ್ರ ಅನುದಾನ ಘೋಷಿಸಿ ಸೈನಿಕರೊಂದಿಗೆ ತಮಾಷೆ ಮಾಡುತ್ತಿತ್ತು. ಭರವಸೆ ಈಡೇರಿಸುವ ನಿಟ್ಟಿನಲ್ಲಿ ಒಆರ್ ಒಪಿ ಜಾರಿಗೊಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ಅಭಿನಂದನೆ ಸಲ್ಲಿಸುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!