ಶೀನಾ ಬೋರಾ ಹತ್ಯೆ ಆರೋಪಿಗಳ ಪೊಲೀಸ್ ಕಸ್ಟಡಿ ವಿಸ್ತರಣೆ
ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿಗಳ ಪೊಲೀಸ್ ಕಸ್ಟಡಿಯನ್ನು ಸೆ.7 ವರೆಗೆ ವಿಸ್ತರಿಸಲಾಗಿದೆ.
ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿಗಳ ಪೊಲೀಸ್ ಕಸ್ಟಡಿಯನ್ನು ಸೆ.7 ವರೆಗೆ ವಿಸ್ತರಿಸಲಾಗಿದೆ.
ಪ್ರಕರಣದ ಆರೋಪಿಗಳಾದ ಇಂದ್ರಾಣಿ ಮುಖರ್ಜಿ, ಕಾರು ಚಾಲಕ ಶ್ಯಾಮ್ ರೈ, ಇಂದ್ರಾಣಿ ಮುಖರ್ಜಿಯ ಮಾಜಿ ಪತಿ ಸಂಜೀವ್ ಖನ್ನಾ ಪೊಲೀಸ್ ಕಸ್ಟಡಿ ಅವಧಿ ಸೆ.5 ಕ್ಕೆ ಮುಕ್ತಾಯಗೊಂಡಿತ್ತು. ಆರೋಪಿಗಳನ್ನು ಮುಂಬೈ ಕೋರ್ಟ್ ಎದುರು ಹಾಜರುಪಡಿಸಿದ ಮುಂಬೈ ಪೊಲೀಸರು, ಇಂದ್ರಾಣಿ ಮುಖರ್ಜಿ ಪೊಲೀಸ್ ವಿಚಾರಣೆಗೆ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಆರೋಪಿಗಳಿಂದ ಮತ್ತಷ್ಟು ಮಾಹಿತಿ ಪಡೆಯಬೇಕಿರುವುದರಿಂದ ಕಸ್ಟಡಿ ವಿಸ್ತರಣೆ ಮಾಡಬೇಕೆಂದು ಎಂದು ಕೋರ್ಟ್ ಗೆ ಮನವಿ ಮಾಡಿದ್ದರು.
ಪೊಲೀಸ್ ಕಸ್ಟಡಿ ವಿಸ್ತರಣೆಯಾಗಿದ್ದು ಆರೋಪಿಗಳನ್ನು ಮುಂಬೈ ನ ಖಾರ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.