ದೇಶ

ಕಾರ್ಯಭಾರ ಮುಗಿದ ಮೇಲೂ ವಿದೇಶದಲ್ಲೇ ಇದ್ದರೆ ಅಧಿಕಾರಿಗಳ ಕೆಲಸಕ್ಕೆ ಕುತ್ತು

ಸರ್ಕಾರಿ ಕೆಲಸದ ನಿಮಿತ್ತ ವಿದೇಶಗಳಿಗೆ ತೆರಳಿ, ಕಾರ್ಯಭಾರ ಮುಕ್ತಾಯಗೊಂಡ ನಂತರವೂ ವಿದೇಶದಲ್ಲೇ ಮೋಜು ಮಾಡುವ ಸರ್ಕಾರಿ ಅಧಿಕಾರಿಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ನವದೆಹಲಿ: ಸರ್ಕಾರಿ ಕೆಲಸದ ನಿಮಿತ್ತ ವಿದೇಶಗಳಿಗೆ ತೆರಳಿ, ಕಾರ್ಯಭಾರ ಮುಕ್ತಾಯಗೊಂಡ ನಂತರವೂ ವಿದೇಶದಲ್ಲೇ ಮೋಜು ಮಾಡುವ ಅಧಿಕಾರಿಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ಕೇಂದ್ರ ಸರ್ಕಾರ ಹೊಸದಾಗಿ ರೂಪಿಸಿರುವ ನಿಯಮದ ಪ್ರಕಾರ ಐಎಎಸ್, ಐಪಿಎಸ್ ಅಧಿಕಾರಿಗಳು ಕಾರ್ಯಭಾರ ಮುಕ್ತಾಯಗೊಂಡ ನಂತರವೂ ಅನುಮತಿ ಇಲ್ಲದೇ ವಿದೇಶದಲ್ಲೇ ಇದ್ದರೆ, ಅಂಥಹ ಅಧಿಕಾರಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ.
ವಿದೇಶಕ್ಕೆ ತೆರಳುವ ಕೆಲವು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳು, ಕೆಲಸ ಮುಕ್ತಾಯಗೊಂಡ ನಂತರವೂ ವಿದೇಶದಿಂದ ವಾಪಸ್ಸಾಗದೇ ಅನಧಿಕೃತವಾಗಿ ರಜೆ ಹಾಕುತ್ತಿರುವುದು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಿಯಮಗಳ ಪ್ರಕಾರ ಅಧಿಕಾರಿಗಳ ಅಧ್ಯಯನ ಪ್ರವಾಸ, ವಿದೇಶದಲ್ಲಿ ಕಾರ್ಯಭಾರದ ಅವಧಿಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗುತ್ತದೆ. ನಿಗದಿಗಿಂತಲೂ ಹೆಚ್ಚು ಕಾಲ ವಿದೇಶದಲ್ಲಿರಬೇಕಾದರೆ ಅವರು ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಅನುಮತಿ ಇಲ್ಲದೇ ಅನಧಿಕೃತ ರಜೆ ಹಾಕಿ ಮೋಜು ಮಾಡಲು ತೊಡಗಿದರೆ ಅಂಥವರು ಕೆಲಸ ಕಳೆದುಕೊಳ್ಳುವುದು ನಿಶ್ಚಿತವಾಗಿದೆ.    
 ಅಧಿಕಾರಿಗಳ ವಿದೇಶ ಪ್ರವಾಸಗಳ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಹಿತಿ ನೀಡಬೇಕು, ವಿದೇಶದಿಂದ ವಾಪಸ್ಸಾಗುವುದು ತಡವಾದರೆ ಅಧಿಕಾರಿ ರಾಜ್ಯ ಸರ್ಕಾರಕ್ಕೆ ಸೂಕ್ತ ಕಾರಣ ನೀಡಬೇಕು, ಒಂದು ವೇಳೆ ಈ ನಿಯಮವನ್ನು ಪಾಕಿಸಲು ರಾಜ್ಯ ಸರ್ಕಾರ ಈ ಸೂಚನೆಗಳನ್ನು ಅನುಸರಿಸಲು ವಿಫಲವಾದರೆ, ಕೇಂದ್ರ ಸರ್ಕಾರ ನೇರವಾಗಿ ನಿಯಮ ಉಲ್ಲಂಗಿಸಿದ ಅಧಿಕಾರಿಯನ್ನು ವಜಾಗೊಳಿಸಲಿದೆ. ಹೊಸ ನಿಯಮಗಳ ಬಗ್ಗೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT