ಮುಲಾಯಂ ಸಿಂಗ್ ಯಾದವ್ 
ದೇಶ

ಎಸ್.ಪಿ ಸದಸ್ಯೆ ಲೀಲಾವತಿ ಸುಂದರಿಯಲ್ಲ ಆದರೂ ಎಂಎಲ್ ಸಿ ಮಾಡಿದ್ದೇವೆ: ಮುಲಾಯಂ ಸಿಂಗ್

ವಿವಾದಗಳಿಂದಲೇ ಸುದ್ದಿಯಾಗುವ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನವದೆಹಲಿ: ವಿವಾದಗಳಿಂದಲೇ ಸುದ್ದಿಯಾಗುವ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಮಾಜವಾದಿ ಪಕ್ಷದ ಮಹಿಳಾ ಘಟಕದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಮುಲಾಯಂ ಸಿಂಗ್ ಯಾದವ್, ತಮ್ಮದೇ ಪಕ್ಷದ ಮಹಿಳಾ ಕಾರ್ಯಕರ್ತರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.  ಎಸ್.ಪಿ ವಿಧಾನಪರಿಷತ್ ಸದಸ್ಯೆ ಲೀಲಾವತಿ ಕುಶ್ವಾಹ ಸುಂದರವಾಗಿ ಇಲ್ಲ, ಆದರೂ ಅವರನ್ನು ವಿಧಾನಪರಿಷತ್ ಸದಸ್ಯೆಯನ್ನಾಗಿ ಮಾಡಿದ್ದೇವೆ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.

"ಲೀಲಾವತಿ ಅವರು ಸುಂದರವಾಗಿಲ್ಲದಿದ್ದರೂ ಆಕೆ ಪಕ್ಷಕ್ಕಾಗಿ ಲಾಠಿ ಎದುರಿಸಿದ್ದಾರೆ, ಅವರ ಕೆಲಸಗಳನ್ನು ಹಾಗೂ ಕೊಡುಗೆಗಳನ್ನು ಪರಿಗಣಿಸಿ ವಿಧಾನಪರಿಷತ್ ಸದಸ್ಯೆಯನ್ನಾಗಿ ಮಾಡಿದ್ದೇವೆ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
ಮುಲಾಯಂ ಸಿಂಗ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಗ್ಯಾಂಗ್ ರೇಪ್ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು. ಒಬ್ಬ ಅತ್ಯಾಚಾರ ಮಾಡಿದರೆ ಎಫ್ಐಆರ್ ನಲ್ಲಿ 4 ಜನರ ಹೆಸರಿರುತ್ತದೆ. ಆದರೆ ಗ್ಯಾಂಗ್ ರೇಪ್ ನಡೆಯುವುದಕ್ಕೆ ಸಾಧ್ಯವಿಲ್ಲ ಎಂದಿದ್ದರು. 2012 ರ ಮಹಿಳಾ ಮೀಸಲಾತಿ ಮಸೂದೆ ಬಗ್ಗೆಯೂ ತಕರಾರು ತೆಗೆದಿದ್ದ ಮುಲಾಯಂ ಸಿಂಗ್, ಮಸೂದೆಯಿಂದ ಗ್ರಾಮೀಣ ಮಹಿಳೆಯರಿಗೆ ಪ್ರಯೋಜನವಾಗುವುದಿಲ್ಲ. ಏಕೆಂದರೆ ಗ್ರಾಮೀಣ ಮಹಿಳೆಯರು ಆಕರ್ಷಣೀಯವಾಗಿರುವುದಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!