ಶ್ರೀನಗರ: ಉತ್ತರ ಕಾಶ್ಮೀರದ ಹಂದ್ವಾರದಲ್ಲಿ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಪರಿಣಾಮ ಇಬ್ಬರು ಯೋಧರು ಸೇರಿದಂತೆ ಇಬ್ಬರು ಉಗ್ರರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆಸಿದೆ.
ಕುಪ್ವಾರ ಜಿಲ್ಲೆಯ ಹಂದ್ವಾರದ ಲರಿಬಾಲ್ ಹಳ್ಳಿಯಲ್ಲಿ ಅಡಗಿ ಕುಳಿತಿರುವ ಉಗ್ರರು ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಹೀಗಾಗಿ ಉಗ್ರರನ್ನು ಮಟ್ಟ ಹಾಕಲು ಭಾರತೀಯ ಯೋಧರು ಕಾರ್ಯಾಚರಣೆಗಿಳಿದಿದ್ದು, ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದು, ಇಬ್ಬರು ಯೋಧರು ಸಾವನ್ನಪ್ಪಿದ್ದಾರೆಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಉಗ್ರರು ತಮ್ಮ ದಾಳಿಯನ್ನು ಮತ್ತೆ ಮುಂದುವರೆಸಿದ್ದು, ಭಾರತೀಯ ಯೋಧರು ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆಂದು ಹೇಳಲಾಗುತ್ತಿದೆ.