ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಮಸೂದೆಗೆ ಸಂಸತ್ತಿನ ಅನುಮೋದನೆ ಪಡೆಯಲು ವಿಶೇಷ ಅಧಿವೇಶನ ಕರೆಯುವ ಯೋಜನೆಯನ್ನು ಕೈಬಿಟ್ಟಿರುವ ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನವನ್ನೇ ಅವಧಿಗೆ ಮುನ್ನವೇ ಕರೆಯಲು ನಿರ್ಧರಿಸಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯನಾಯ್ಡು ಗುರುವಾರ ಈ ವಿಷಯ ತಿಳಿಸಿದ್ದು ಬಿಹಾರ ವಿಧಾನಸಭೆ ಚುನಾವಣೆಗಳು ಮುಗಿದ ನಂತರ ಅಧಿವೇಶನ ಕರೆಯಲಾಗುವುದು ಎಂದು ಹೇಳಿದ್ದಾರೆ. ಮುಂದಿನ ವರ್ಷ ಏಪ್ರಿಲ್‍ನಿಂದ ಜಿಎಸ್‍ಟಿ ಜಾರಿಗೊಳಿಸುವ ಮಹತ್ವದ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿದೆ.
ಕೆಟ್ಟರಾಜಕಾರಣದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ವಿಶೇಷ ಅಧಿವೇಶನ ಕರೆಯಬೇಕೆಂಬ ಕೇಂದ್ರ ಸರ್ಕಾರದ ಯೋಜನೆಯನ್ನು ಕಾಂಗ್ರೆಸ್ ನಿಷ್ಕ್ರಿಯಗೊಳಿಸಿತು ಎಂದು ನಾಯ್ಡು ಆರೋಪಿಸಿದ್ದಾರೆ. ಮಸೂದೆ ಜಾರಿ ತರುವುದು ಈ ಸದ್ಯದ ತುರ್ತಾಗಿದೆ. ಇದಕ್ಕಾಗಿ ಮುಂದುವರೆದ ಮುಂಗಾರು ಅಧಿವೇಶನ ಕರೆಯದಿದ್ದಕ್ಕೆ ನಮಗೆ ತುಂಬಾ ಬೇಸರವಾಗಿದೆ ಎಂದಿದ್ದಾರೆ.