ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಘಟಕ(ಡಿಯುಎಸ್ ಯು)ದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಖೀಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ ) ಎಲ್ಲಾ ನಾಲ್ಕು ಸ್ಥಾನಗಳಲ್ಲೂ ಗೆಲು ಸಾಧಿಸಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮುಖಭಂಗವಾಗಿದೆ.
ಡಿಯುಎಸ್ ಯು ಚುನಾವಣೆ ಫಲಿತಾಂಶ ಇಂದು ಇಪ್ರಕಟವಾಗಿದ್ದು, ಎಬಿವಿಪಿ ನಾಲ್ಲು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಸಾಧಿಸಿದೆ.ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಖಾತೆ ತೆರೆಯುವಲ್ಲಿ ವಿಫಲವಾಗಿವೆ.
ಎಬಿವಿಪಿಯ ಸತಿಂದರ್ ಅವಾನ ಅಧ್ಯಕ್ಷರಾಗಿ, ಸನ್ನಿ ದೆಧಾ ಉಪಾಧ್ಯಕ್ಷರಾಗಿ, ಅಂಜಲಿ ರಾಣಾ ಅವರು ಕಾರ್ಯದರ್ಶಿಯಾಗಿ ಹಾಗೂ ಚತ್ತರ್ ಪಾಲ್ ಯಾದವ್ ಅವರು ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಪ್ರಚಾರ, ವಿದ್ಯಾರ್ಥಿ ಸ್ನೇಹಿ ಯೋಜನೆಗಳ ಭರವಸೆಯ ಹೊರತಾಗಿಯೂ ಆಮ್ ಆದ್ಮಿಯ ವಿದ್ಯಾರ್ಥಿ ಸಂಘಟನೆ ಛಾತ್ರ ಯುವ ಸಂಘರ್ಷ ಸಮಿತಿ (ಸಿವೈಎಸ್‌ಎಸ್) ತನ್ನ ಮೊದಲ ಚುನಾವಣೆಯಲ್ಲಿ ಖಾತೆ ತೆರೆಯುವಲ್ಲಿ ವಿಫಲವಾಗಿದೆ.