ಮೆಕ್ಕಾ ದುರಂತದ ದೃಶ್ಯ 
ದೇಶ

ಮೆಕ್ಕಾ ದುರಂತ: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ ಸಂತಾಪ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಮೆಕ್ಕಾದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ...

ನವದೆಹಲಿ:ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಮೆಕ್ಕಾದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಸಾವಿಗೀಡಾದವರಲ್ಲಿ ಇಬ್ಬರು ಭಾರತೀಯರೂ ಸೇರಿದ್ದಾರೆ.

ಮೆಕ್ಕಾದಲ್ಲಿ ಕ್ರೇನ್ ಅಪಘಾತದಲ್ಲಿ ಸಾವಿಗೀಡಾದ ಕುಟುಂಬಗಳಿಗೆ ಸಾಂತ್ವನ ಹೇಳಲು ಇಚ್ಛಿಸುತ್ತೇನೆ. ಅವರ ಕುಟುಂಬದವರಿಗೆ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಟ್ವೀಟ್ ಮಾಡಿದ್ದಾರೆ.

ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ದುರಂತದಲ್ಲಿ ಸಾವಿಗೀಡಾದವರ ಮತ್ತು ಗಾಯಗೊಂಡವರ ಕುಟುಂಬದವರಿಗೆ ಎಲ್ಲಾ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ''ದುರಂತದಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ಪರಿಸ್ಥಿತಿಯನ್ನು ಎದುರಿಸುವ ಧೈರ್ಯವನ್ನು ಭಗವಂತ ನೀಡಲಿ. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್