ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (ಸಂಗ್ರಹ ಚಿತ್ರ) 
ದೇಶ

ಅ.2ರ ಉಪವಾಸ ಸತ್ಯಾಗ್ರಹ ರದ್ದುಪಡಿಸಿದ ಅಣ್ಣಾ ಹಜಾರೆ

ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಭೂ ಸ್ವಾಧೀನ ಕಾಯ್ದೆ ವಿರೋಧ ಹಾಗೂ ಸಮಾನ ವೇತನ, ಸಮಾನ ಪಿಂಚಣಿ ಯೋಜನೆಗೆ ಒತ್ತಾಯಿಸಿ ಅ.2ರಂದು ನಿಗದಿ ಪಡಿಸಲಾಗಿದ್ದ ಉಪವಾಸ ಸತ್ಯಾಗ್ರಹವನ್ನು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು...

ಮುಂಬೈ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಭೂ ಸ್ವಾಧೀನ ಕಾಯ್ದೆ ವಿರೋಧ ಹಾಗೂ ಸಮಾನ ವೇತನ, ಸಮಾನ ಪಿಂಚಣಿ ಯೋಜನೆಗೆ ಒತ್ತಾಯಿಸಿ ಅ.2ರಂದು ನಿಗದಿ ಪಡಿಸಲಾಗಿದ್ದ ಉಪವಾಸ ಸತ್ಯಾಗ್ರಹವನ್ನು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಶನಿವಾರ ರದ್ದು ಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಸತ್ಯಾಗ್ರಹ ಕುರಿತಂತೆ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಅಣ್ಣಾ ಹಜಾರೆ ಅವರು, ಮಹಾತ್ಮಗಾಂಧಿ ಅವರ ಜನ್ಮದಿನವಾದ ಅ.2 ರಂದು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ನಿರ್ಧಾನ ಕೈಗೊಳ್ಳಲಾಗಿತ್ತು. ಆದರೆ, ಹೋರಾಟ ಹಾಗೂ ಜನರ ಒತ್ತಾಯಗಳಿಗೆ ಮಣಿದ ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಯೋಧರಿಗೆ ಸಮಾನ ವೇತನ ಹಾಗೂ ಸಮಾನ ಪಿಂಚಣಿ ಯೋಜನೆಯನ್ನು ಜಾರಿ ಮಾಡಿದೆ. ಹೀಗಾಗಿ ಅ.2ರಂದು ನಿರ್ಧರಿಸಿದ್ದ ಸತ್ಯಾಗ್ರಹವನ್ನು ರದ್ದು ಪಡಿಸಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕೇಂದ್ರದ ವಿವಾದಿತ ಭೂಸ್ವಾಧೀನ ಮಸೂದೆ ಕುರಿತಂತೆ ಮಾತನಾಡಿದ ಅವರು, ಭೂ ಸ್ವಾಧೀನ ಕಾಯ್ದೆಯು ರೈತರಿ ವಿರೋಧ ಮಸೂದೆಯಾಗಿದ್ದು, ಇದರಿಂದ ರೈತರಿಗೆ ಅನ್ಯಾಯವಾಗಲಿದೆ. ಈ ಕುರಿತಂತೆ ಶೀಘ್ರದಲ್ಲೇ ಸಾರ್ವಜನಿಕವಾಗಿ ಹೋರಾಟ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಅ.2ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಅಣ್ಣಾ ಹಜಾರೆ ಅವರು ಈ ಹಿಂದೆ ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT