ವಸುಂದರಾ ರಾಜೇ 
ದೇಶ

ಈದ್ ಹಬ್ಬಕ್ಕೆ ಸಾರ್ವಜನಿಕ ರಜೆ ನಿರಾಕರಿಸಿದ ರಾಜಸ್ತಾನ ಸರ್ಕಾರ

ಸೆಪ್ಟಂಬರ್‌ 25ರಂದು ಈದ್ ಆಚರಣ ಇದ್ದು, ರಾಜಸ್ಥಾನ ಸರಕಾರ ಅದೇ ದಿನ ರಾಜ್ಯಾದ್ಯಂತ ಎಲ್ಲ ಕಾಲೇಜುಗಳಲ್ಲಿ ರಕ್ತದಾನ ಶಿಬಿರ ಆಯೋಜಿಸಿದೆ...

ಜೈಪುರ: ಸೆಪ್ಟಂಬರ್‌ 25ರಂದು ಈದ್ ಆಚರಣ ಇದ್ದು, ರಾಜಸ್ಥಾನ ಸರಕಾರ ಅದೇ ದಿನ ರಾಜ್ಯಾದ್ಯಂತ ಎಲ್ಲ ಕಾಲೇಜುಗಳಲ್ಲಿ ರಕ್ತದಾನ ಶಿಬಿರ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಅಂದು ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ನಿರಾಕರಿಸಲಾಗಿದೆ.

ಬಿಜೆಪಿ ಹಿರಿಯ ನಾಯಕ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮ ವರ್ಷಾಚರಣೆಯ ಅಂಗವಾಗಿ ಸೆ.25ರಂದು, ಅಂದರೆ ಮುಸ್ಲಿಮರ ಈದ್‌  ಹಬ್ಬದ ದಿನ ರಾಜ್ಯದ ಶಾಲಾ ಕಾಲೇಜುಗಳಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಬಿಜೆಪಿ ಸರಕಾರವು ಉದ್ದೇಶಪೂರ್ವಕವಾಗಿ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಅಸಮಾಧಾನ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ,  "ಫೋರಂ ಫಾರ್‌ ಡೆಮಾಕ್ರಸಿ ಅಂಡ್‌ ಕಮ್ಯುನಲ್‌ ಎಮಿಟಿ' ಎಂಬ ಸಾಮಾಜಿಕ ಸೇವಾ ಸಂಘಟನೆಯು ರಾಜಸ್ಥಾನದ ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದೆ.

"ಸರಕಾರದ ಕ್ರಮ ಸಂವಿಧಾನ ವಿರೋಧಿಯಾಗಿದೆ. ರಾಜ್ಯಾದ್ಯಂತದ ಕಾಲೇಜುಗಳಲ್ಲಿ ಕೆಲಸ ಮಾಡುವ ಮುಸ್ಲಿಂ ಬಂಧುಗಳಿಗೆ ಅಂದು (ಸೆ.25) ತಮ್ಮ ಮನೆಮಂದಿಯೊಂದಿಗೆ ಹಬ್ಬವನ್ನು ಆಚರಿಸುವುದಕ್ಕೆ ಅವಕಾಶವನ್ನು ನಿರಾಕರಿಸಿದಂತಾಗಿದೆ'  ಸಂಘಟನೆಯ ಕಾರ್ಯದರ್ಶಿ ಮೊಹಮ್ಮದ್‌ ಇಕ್ಬಾದ್‌ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಡಿಕೆ ಶಿವಕುಮಾರ್ ಪತ್ರ!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video