ಮನಿಶ್ ಸಿಸೋಡಿಯಾ 
ದೇಶ

ಡೆಂಗ್ಯೂಗೆ ಚಿಕಿತ್ಸೆ ನೀಡಲು ನಿರಾಕರಿಸಿದ ಆಸ್ಪತ್ರೆ ವಿರುದ್ಧ ತನಿಖೆಗೆ ದೆಹಲಿ ಸರ್ಕಾರ ಆದೇಶ

ಡೆಂಗ್ಯೂನಿಂದ ಬಳಲುತ್ತಿದ್ದ ಅವಿನಾಶ್ ಎಂಬ ಬಾಲಕನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ ಆಸ್ಪತ್ರೆಗಳ ವಿರುದ್ಧ ದೆಹಲಿ ಉಪ...

ನವದೆಹಲಿ: ಡೆಂಗ್ಯೂನಿಂದ ಬಳಲುತ್ತಿದ್ದ ಅವಿನಾಶ್ ಎಂಬ ಬಾಲಕನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ ಆಸ್ಪತ್ರೆಗಳ ವಿರುದ್ಧ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ನ್ಯಾಯಾಂಗ ತನಿಖೆಗೆ ಮಂಗಳವಾರ ಆದೇಶಿಸಿದ್ದಾರೆ.

ಅವಿನಾಶ್ ರೌತ್ ಗೆ ಚಿಕಿತ್ಸೆ ನೀಡಲು ನಿರಾಕರಿಸಿದ 5 ಆಸ್ಪತ್ರೆಗಳ ವಿರುದ್ಧ ತನಿಖೆ ನಡೆಯಲಿದೆ ಎಂದು ದೆಹಲಿ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಚಿಕಿತ್ಸೆ ನೀಡದ ಪರಿಣಾಮ ಅವಿನಾಶ್ ಸಾವನ್ನಪ್ಪಿದ್ದ, ಈ ಘಟನೆಯ ಶಾಕ್ ನಿಂದ ಪೋಷಕರು ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರಕರಣದ ತನಿಖೆಗೆ ಸ್ಥಳೀಯ ಉಪ ವಿಭಾಗೀಯ ನ್ಯಾಯಾಧೀಶರೊಬ್ಬರನ್ನು ನೇಮಕ ಮಾಡಿ, ಏಳು ದಿನಗಳಲ್ಲಿ ಸರ್ಕಾರಕ್ಕೆ ವರದಿ ನೀಡುವಂತೆ ದೆಹಲಿ ಉಪ ಆಯುಕ್ತರಿಗೆ ಸಿಸೋಡಿಯಾ ಅವರು ಸೂಚಿಸಿದ್ದಾರೆ.

ಭಾನುವಾರ ಡೆಂಗ್ಯೂ ಜ್ವರಕ್ಕೆ ಆರು ವರ್ಷದ ಅಮಾನ್ ಶರ್ಮಾ ಎಂಬ ಬಾಲಕ ಬಲಿಯಾಗಿದ್ದ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಅಮಾನ್ ಶರ್ಮಾ ನನ್ನು ಆತನ ತಂದೆ ಮಧ್ಯರಾತ್ರಿ 2.30 ರ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದಿದ್ದರು. ಆದರೆ ದೆಹಲಿಯ ಐದು ಆಸ್ಪತ್ರೆಗಳು ಬಾಲಕನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದವು. ಇದರಿಂದ ಬಾಲಕ ಮೃತ ಪಟ್ಟಿದ್ದ. ಈ ಹಿನ್ನೆಲೆಯಲ್ಲಿ ದೆಹಲಿಯ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸಮನ್ಸ್  ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!