ನವದೆಹಲಿ: ಜಮ್ಮ ಮತ್ತು ಕಾಶ್ಮೀರ ಗಡಿಯಲ್ಲಿ ಭಾರತ ವಿರುದ್ಧ ದಾಳಿ ಮಾಡಲು ನಿರಾಯಾಸವಾಗಿ ಯತ್ನ ಮಾಡುತ್ತಿರುವ ಪಾಕಿಸ್ತಾನಕ್ಕೆ ಭಾರತ ತಕ್ಕ ಉತ್ತರ ನೀಡುತ್ತಿದೆ ಎಂದು ಕೇಂದ್ರ ಗೃಹ ಖಾತೆಯ ಸಚಿವ ಕಿರಣ್ ರಿಜಿಜು ಬುಧವಾರ ಹೇಳಿದ್ದಾರೆ.
ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಕುರಿತಂತೆ ಮಾತನಾಡಿರುವ ಅವರು, ಭಾರತ ಎಂದಿಗೂ ಕದನ ವಿರಾಮ ಉಲ್ಲಂಘಿಸಿಲ್ಲ. ಎಂದಿಗೂ ತಾನಾಗಿಯೇ ಅಪ್ರಚೋದಿತ ಗುಂಡಿನ ದಾಳಿ ಮಾಡಿಲ್ಲ. ಆದರೆ, ಪಾಕಿಸ್ತಾನ ಈ ಹಿಂದಿನಲೂ ತನ್ನ ಚಾಳಿಯನ್ನು ಮುಂದುವರೆಸಿಕೊಂಡಿದ್ದು, ಪಾಕ್ ದಾಳಿಗೆ ಭಾರತ ದಿಟ್ಟ ಉತ್ತರ ನೀಡುತ್ತಿದೆ ಎಂದು ಹೇಳಿದ್ದಾರೆ.
ಕಳೆದ ಹಲವು ತಿಂಗಳಿನಿಂದಲೂ ಕದನ ವಿರಾಮ ಉಲ್ಲಂಘಿಸಿಕೊಂಡು ಬಂದಿರುವ ಪಾಕಿಸ್ತಾನವು ಸೆಪ್ಟಂಬರ್ ತಿಂಗಳಿನಲ್ಲಿ 17 ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.